ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಶೆಡ್
Posted On:
20-07-2024 02:00PM
ಪಡುಬಿದ್ರಿ : ಇಲ್ಲಿನ ಕಡಲ ಕಿನಾರೆಯ ನಡಿಪಟ್ಣ ಪ್ರದೇಶದಲ್ಲಿ ಕಡಲ್ಕೊರೆತ ಹೆಚ್ಚಿದ್ದು ಕೆಲವು ದಿನಗಳ ಹಿಂದೆ ಅಪಾಯದಂಚಿನಲ್ಲಿದ್ದ ಮೀನುಗಾರಿಕಾ ಶೆಡ್ ಕಡಲಬ್ಬರಕ್ಕೆ ಸಿಲುಕಿ, ಹಾನಿಯಾಗಿದೆ. ಮೀನುಗಾರಿಕಾ ರಸ್ತೆಗೂ ಹಾನಿಯಾಗುವ ಸಂಭವವಿದೆ.
ಪಡುಬಿದ್ರಿಯ ಸುಮಾರು 50 ಕುಟುಂಬದ ಜೀವನವನ್ನು ಅವಲಂಬಿಸಿರುವ ನಾಡದೋಣಿ ಮಹೇಶ್ವರಿ ಡಿಸ್ಕೊ ಫಂಡ್ ನ ಮೀನುಗಾರಿಕೆಯ ಶೆಡ್ ಇದಾಗಿದೆ. ಮೀನುಗಾರಿಕಾ ರಸ್ತೆಗೂ ಅಪಾಯದ ಸಂಭವವಿದೆ.
ಈ ಬಗ್ಗೆ ಕೂಡಲೇ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಆದಷ್ಟು ಬೇಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.