ಪಡುಬಿದ್ರಿ : ಬಂಟರ ಸಂಘದಲ್ಲಿ ಆಟಿ ಕೂಟ ಕಾರ್ಯಕ್ರಮ
Posted On:
28-07-2024 04:30PM
ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು.
ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗ ಆಯೋಜಿಸಿದ ಆಟಿದ ಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯರಾದ ನಳಿನಿ ರವೀಂದ್ರನಾಥ ಹೆಗ್ಡೆ, ಶೀಲಾ ಕೆ ಶೆಟ್ಟಿ ತುಳುನಾಡಿನ ಕ್ರೀಡೆ ಚೆನ್ನೆಮನೆ ಆಟದ ಪ್ರಾತ್ಯಕ್ಷಿಕೆ ನೀಡಿದರು.
ಸಮಾಜ ಸೇವಕ, ಪ್ರಗತಿಪರ ಕೃಷಿಕ ಸಂತೋಷ್ ಶೆಟ್ಟಿ ಬರ್ಪಾಣಿ ಇವರನ್ನು ಗೌರವಿಸಲಾಯಿತು. ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗಿಡಮೂಲಿಕೆಯ ಸಸಿಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ವೈ. ಶಶಿಧರ್ ಕೆ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ಸಿರಿಮುಡಿ ದತ್ತಿನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ವಹಿಸಿದ್ದರು.
ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಎಸ್ ಶೆಟ್ಟಿ ಸ್ವಾಗತಿಸಿದರು. ಅಕ್ಷತಾ ಸುರೇಂದ್ರ ಶೆಟ್ಟಿ ನಿರೂಪಿಸಿದರು. ಮಹಿಳಾ ವಿಭಾಗದ ಕಾರ್ಯದರ್ಶಿ ವಾಣಿ ರವಿ ಶೆಟ್ಟಿ ವಂದಿಸಿದರು.