ಉಡುಪಿ : ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಸಂಜನಾ ಜೆ. ಸುವರ್ಣ ಇವರು ಬೆಂಗಳೂರು ದೂರದರ್ಶನ ಕೇಂದ್ರದ 'ಬಿ' ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ.
ಇವರು ಉಡುಪಿಯ ಪ್ರತಿಷ್ಠಿತ ನೃತ್ಯ ಸಂಸ್ಥೆ ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಇಲ್ಲಿನ ಗುರು ವಿದ್ವಾನ್ ಕೆ. ಭವಾನಿಶಂಕರ್ ಇವರ ಶಿಷ್ಯೆಯಾಗಿದ್ದು, ತೋನ್ಸೆ ಹೊನ್ನಪ್ಪ ಕುದ್ರುವಿನ ಸಾವಿತ್ರಿ ಹಾಗೂ ಅಂಬಲಪಾಡಿ ದಿ।ಜಯರಾಮ್ ಪೂಜಾರಿಯವರ ಸುಪುತ್ರಿ.