ಬೆಳಪು ಹಾಲು ಉತ್ಪಾದಕರ ಸಂಘದ ಮಹಾಸಭೆ ; 25% ಡಿವಿಡೆಂಡ್ ಘೋಷಣೆ
Posted On:
31-07-2024 07:32PM
ಬೆಳಪು : ಬೆಳಪು ಹಾಲು ಉತ್ಪದಕರ ಸಂಘ ಕಳೆದ 25 ವರ್ಷಗಳಿಂದ ನಿರಂತರ ಲಾಭ ಗಳಿಸುತ್ತಿದ್ದು, ಪ್ರತಿದಿನ 89೦ ರಿಂದ 1,000 ಲೀಟರ್ ಹಾಲು ಸ್ಥಳೀಯ ಸದಸ್ಯರಿಂದ ಒಕ್ಕೂಟಕ್ಕೆ ನೀಡುತ್ತಿದ್ದು, 2023- 24ನೇ ಸಾಲಿನಲ್ಲಿ ಸದಸ್ಯರಿಗೆ 25% ಡಿವಿಡೆಂಡ್ ನೀಡಿ ದಾಖಲೆ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದಾರೆ.
ಬೆಳಪು ಹಾಲು ಉತ್ಪದಕರ ಸಂಘದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಬೆಳಪು ಹಾಲು ಉತ್ಪಾದಕರ ಸಂಘ ಇನ್ನೂ ಪ್ರಗತಿಯತ್ತ ಸಾಗಬೇಕಿದೆ. ಪ್ರತಿ ಮನೆಯಲ್ಲಿಯೂ ಹಸು ಸಾಕಣೆ ಮಾಡಬೇಕು. ಮಾನವನಿಗೆ ಕೇಳಿದ್ದನ್ನು ಕೊಡುವ ಕಾಮಧೇನು ಹಸುವಾಗಿದ್ದು, ಇದರಿಂದ ಕುಟುಂಬ ನಿರ್ವಹಣೆ, ಮನಸಿಗೆ ನೆಮ್ಮದಿ ಸಾಧ್ಯ. ಹಸು ಸಾಕಲು ಮುಂದೆ ಬಂದರೆ ಕಡಿಮೆ ಬಡ್ಡಿಯಲ್ಲಿ ಬೆಳಪು ಸಹಕಾರಿ ಸಂಘದಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದರು.
ಸಂಘದ ಅಭಿವೃದ್ಧಿ ಮತ್ತು ಪಶುಗಳಲ್ಲಿ ಸಲಹೆ ವಿಧಾನವನ್ನು ಒಕ್ಕೂಟದ ಉಪವ್ಯವಸ್ಥಾಪಕ ಡಾ. ಅನಿಲ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.
ಸದ್ರಿ ವರ್ಷ ಸಂಘಕ್ಕೆ ಅತೀ ಹೆಚ್ಚು ಹಾಲು ನೀಡಿದ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಪ್ರಥಮ, ಸಂದೀಪ್ ಶೆಟ್ಟಿ ದ್ವಿತೀಯ ಬಹುಮಾನ, ಗಣೇಶ್ ದೇವಾಡಿಗ ತೃತೀಯ ಬಹುಮಾನ ಪಡೆದರು.
ಸಂಘದ ಸದಸ್ಯರಿಗೆ ೨ ಲಕ್ಷ ೪೨ ಸಾವಿರ ಬೋನಸ್ ವಿತರಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷ ದಿನೇಶ್ ಶೆಟ್ಟಿ, ನಿರ್ದೇಶಕರುಗಳಾದ ರಮಾನಂದ ಮೂಲ್ಯ, ಚಂದ್ರಕಾಂತ್ ಶೆಟ್ಟಿ, ಗಣೇಶ್ ದೇವಾಡಿಗ, ದಿನೇಶ್ ಪೂಜಾರಿ, ಜೆನ್ನಿ ನರಸಿಂಹ ಭಟ್, ಗುರುರಾಜ ಆಚಾರ್ಯ, ಅಣ್ಣು ಮುಖಾರಿ, ದಿವಾಕರ ಶೆಟ್ಟಿ, ಗೌರಿ ಶೆಟ್ಟಿ, ಶ್ರೀದೇವಿ ಎಸ್ ಪೂಜಾರಿ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾದವ್ ರಾವ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.