ಕಾಪು : ಇನ್ನಂಜೆ ಮಹಿಳಾ ಮಂಡಳಿ - ಆಟಿಡೊಂಜಿ ದಿನ ಕಾರ್ಯಕ್ರಮ
Posted On:
31-07-2024 07:43PM
ಕಾಪು : ಇನ್ನಂಜೆ ಮಹಿಳಾ ಮಂಡಳಿ (ರಿ.) ಇದರ ವತಿಯಿಂದ ನಡೆದ "ಆಟಿಡೊಂಜಿ ದಿನ" ಕಾರ್ಯಕ್ರಮವು ಜುಲೈ 28ರಂದು ಇನ್ನಂಜೆ ಯುವಕ ಮಂಡಲದ ಸುವರ್ಣ ಸಭಾಭವನದಲ್ಲಿ ನಡೆಯಿತು.
ಮಹಿಳಾ ಮಂಡಳಿಯ ಗೌರವ ಸಲಹೆಗಾರರಾದ ಸಖುನಂದನ್ ಕುಮಾರ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಇಲಾಖೆಯ ನಿವೃತ್ತ ಅಧಿಕಾರಿ ಮೀರಾರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಿಂದಿನ ಕಾಲದ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ, ಭಾಷೆ, ಹಬ್ಬಗಳು, ಆಹಾರಗಳ ಬಗ್ಗೆ ತಿಳಿಸುತ್ತಾ ಇದು ನಾಶವಾಗದಂತೆ ಉಳಿಸಿ ಆಚರಿಸಿ ಮುಂದಿನ ಜನಾಂಗಕ್ಕೆ ತಿಳಿಸಿ ಉಳಿಸುವ ಜವಾಬ್ದಾರಿ ನಮ್ಮ ಮಹಿಳೆಯರಿಗಿದೆ. ತುಳು ಸಾಂಸ್ಕೃತಿಯ ಚಿಂತನೆ ಕಾಲಮಾನದ ಬಗ್ಗೆ ಆಟಿಯ ತಿನಿಸುಗಳಲ್ಲಿರುವ ಪೌಷ್ಟಿಕಾಂಶ , ಔಷಧೀಯ ಗುಣಗಳ ಬಗ್ಗೆ ತಿಳಿಸಿದರು.
ಗ್ರಾಮದ ಹಿರಿಯ ನಾಟಿ ವೈದ್ಯರಾದ ನಾಗಿ ಮಡಿವಾಳ ಹಾಗೂ ಕಮಲ ಆಚಾರ್ಯ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮಹಿಳಾ ಮಂಡಲದ ಅಧ್ಯಕ್ಷೆ ಶ್ವೇತಾ ಲಕ್ಷ್ಮಣ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು.
ವೇದಿಕೆಯಲ್ಲಿ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿ, ಮಂಡಳಿಯ ಉಪಾಧ್ಯಕ್ಷರಾದ ವಸಂತಿ ಆಚಾರ್ಯ, ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಮಂಜುಳಾ ನಾಯ್ಕ್, ಮಂಡಳಿಯ ಗೌರವ ಆಹ್ವಾನಿತರಾದ ಪರಿಮಳಾ ರಮೇಶ್ ಮಿತ್ತಂತಾಯ, ಕಾರ್ಯದರ್ಶಿ ಸಿಲ್ವಿಯಾ ವಿನಿಫೈಡ್ ಕ್ಯಾಸ್ತಲಿನೋ ಉಪಸ್ಥಿತರಿದ್ದರು.
ಅಧ್ಯಕ್ಷೆ ಶ್ವೇತಾ ಲಕ್ಷ್ಮಣ್ ಶೆಟ್ಟಿ ಸ್ವಾಗತಿಸಿದರು. ಟ್ರೀಜಾ ಮೆಚಾಡೋರವರು ಕಾರ್ಯಕ್ರಮ ನಿರೂಪಿಸಿ ಕಾರ್ಯದರ್ಶಿ ಸಿಲ್ವಿಯಾ ವಿನಿಫೈಡ್ ಕ್ಯಾಸ್ತಲಿನೋ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಂಡಳಿಯ ಸದಸ್ಯರಿಗೆ ವಿಶೇಷ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಲಾಯಿತು. ಸುಮಾರು 30 ಬಗೆಯ ಆಟಿ ಖಾದ್ಯಗಳನ್ನು ಉಣ ಬಡಿಸಲಾಯಿತು.