ಶಿರ್ವ : ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್ - ವಲಯ ಮಟ್ಟದ ಬಾಲಕ, ಬಾಲಕಿಯರ ಕಬ್ಬಡ್ಡಿ ಪಂದ್ಯಾಟ
Posted On:
03-08-2024 10:57PM
ಶಿರ್ವ : ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಬಾಲಕ ಬಾಲಕಿಯರ ಕಬ್ಬಡ್ಡಿ ಪಂದ್ಯಾಟ ಶನಿವಾರದಂದು ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ, ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಕಿರಣ್ ಶೆಟ್ಟಿ, ಎಸ್.ವಿ.ಎಚ್ ಶಾಲೆ ಇನ್ನಂಜೆಯ ದೈಹಿಕ ಶಿಕ್ಷಕ ನವೀನ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ
ಹಸನಬ್ಬ ಶೇಖ್, ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಉಪಾಧ್ಯಕ್ಷರಾದ ಉಮ್ಮರ್ ಇಸ್ಮಾಯಿಲ್, ಕಾರ್ಯದರ್ಶಿ ಮೊಹಮ್ಮದ್, ಖಜಾಂಚಿ ಪರ್ವೇಝ್ ಸಲೀಂ ಮತ್ತು ಮುಖ್ಯ ಶಿಕ್ಷಕಿ ಖೈರುನ್ನೀಸಾ ಉಪಸ್ಥಿತರಿದ್ದರು.
ಸಹಶಿಕ್ಷಕಿ ಮುಮ್ತಾಜ್ ಬೇಗಂರವರು ಸ್ವಾಗತಿಸಿದರು. ಉಷಾ ಎಸ್. ನಿರೂಪಿಸಿದರು. ಅಂಬಿಕಾ ಎಸ್. ಪ್ರಭು ವಂದಿಸಿದರು.