ಉಚ್ಚಿಲ : ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್ ಮೂಳೂರು, ಟ್ರಸ್ಟ್ ಸದಸ್ಯರು ಹಾಗೂ ಸಂಜೀವ ಪೂಜಾರಿ ಕಟಪಾಡಿ ಸಹಕಾರದೊಂದಿಗೆ ಆಟಿ ಅಮಾವಾಸ್ಯೆಯ ಪ್ರಯುಕ್ತ ಸತತ 9ನೇ ವರ್ಷ ಹಾಳೆ ಮರದ ತೊಗಟೆಯಿಂದ ಮಾಡಿದ ಕಷಾಯವನ್ನು ಸರಕಾರಿ ಸಂಯುಕ್ತ ಶಾಲೆ ಮೂಳೂರಿನಲ್ಲಿ ಉಚಿತವಾಗಿ ವಿತರಿಸಿದರು.
ಸುಮಾರು 12೦೦ ಜನರು ಕಷಾಯ ಸೇವಿಸಲು ಅನುಕೂಲ ಮಾಡಿಕೊಡಲಾಯಿತು.
ಟ್ರಸ್ಟಿ ಪ್ರತೀಕ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ ಪಿ, ಸದಸ್ಯರಾದ ದಿನೇಶ್ ಪಾಣರ, ಸುನೀಲ್ ಕರ್ಕೇರ, ಅರುಣ್ ಕುಲಾಲ್,ಕಾರ್ತಿಕ್ ಸುವರ್ಣ, ಗಗನ್ ಮೆಂಡನ್, ಆಕಾಶ್, ಅವೀಶ್, ವಿಕಾಸ್, ಶಲಿನ್, ತನೀಶ್, ಪ್ರಜೇಶ್, ಗುರುರಾಜ್ ಪೂಜಾರಿ, ಮನ್ವಿತ್ ಕರ್ಕೇರ, ಜಯೇಶ್ ಸಾಲ್ಯಾನ್ ಉಪಸ್ಥಿತರಿದ್ದರು.