ಕಾಪು : ತಾಲೂಕಿನ ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಹಾಗೂ ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಪ್ರಶಾಂತ್ ಆಚಾರ್ಯರವರು ಕೊಡುಗೆಯಾಗಿ ನೀಡಿದ ಬ್ಯಾಡ್ಮಿಂಟನ್ ಕೋರ್ಟ್ ನ್ನು ಇನ್ನಂಜೆ ಎಸ್ ವಿ ಎಚ್ ಶಾಲಾ ದೈಹಿಕ ಶಿಕ್ಷಕ ನವೀನ್ ಶೆಟ್ಟಿಯವರು ಉದ್ಘಾಟಿಸಿ ಯುವಕ ಮಂಡಲದ ನಿಯೋಜಿತ
ಅಧ್ಯಕ್ಷರಾದ ಮಧುಸೂಧನ್ ಆಚಾರ್ಯರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಂಚಾಯತ್ ಸದಸ್ಯರುಗಳು ಮತ್ತು ಯುವಕ ಮಂಡಲ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.