ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕು ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 02:25PM

ಕಾಪು : ತಾಲೂಕು ಆಡಳಿತದ ವತಿಯಿಂದ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಪು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಚರಿಸಲಾಯಿತು.

ಕಾಪು ದಂಡಾಧಿಕಾರಿ ಡಾ. ಪ್ರತಿಭಾ ಆರ್‌ರವರು ಧ್ವಜಾರೋಹಣಗೈದು,ಮಾತನಾಡಿದ ಅವರು ತಮ್ಮ ಸಂದೇಶದಲ್ಲಿ, ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯ ದಿನಾಚರಣೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ದೇಣಿಗೆಯಾಗಿದೆ.  ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಾಗರಿಕರಾದ ನಮಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಮಹಾತ್ಮ ಗಾಂಧೀಜಿ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕೋಸ್ಕರ ಸಾವಿರಾರು ಮಂದಿ ವೀರ ಸೇನಾನಿಗಳು ಪ್ರಾಣಾರ್ಪಣೆ ಮಾಡಿದ್ದಾರೆ. 200 ವರ್ಷ ಬ್ರಿಟಿಷರ ದಾಸ್ಯದಿಂದ ಮುಕ್ತವಾದ ದಿನ ಇದಾಗಿದ್ದು,  ಮಾತೃ ಭೂಮಿಯ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನಗೈದವರ ಬಲಿದಾನ ನಿಷ್ಪ್ರಯೋಜಕವಾಗಬಾರದು. ನಾವು ದೇಶ ಕಟ್ಟುವ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಕಾಪು ತಾಲೂಕಿನಲ್ಲಿ ಉತ್ತಮ ಅಂಕ ಗಳಿಸಿದರವರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಕಾಪು ತಾಲೂಕು ಪಂಚಾಯತ್ ವಿಸ್ತರಣಾಧಿಕಾರಿ ಜೇಮ್ಸ್ ಡಿಸಿಲ್ವ,‌ ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಪೋಲಿಸ್ ವೃತ್ತ ನಿರೀಕ್ಷಕಿ ಜಯಶ್ರೀ ಎಸ್ ಮಾಣೆ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್, ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ರಿತೇಶ್ ಶೆಟ್ಟಿ ಸೂಡ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪುಂಡಲೀಕ ಮರಾಠೆ ಮತ್ತು ಪುರಸಭಾ ಸದಸ್ಯರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಗೋಪಾಲಕೃಷ್ಣ ಗಾಂವ್ಕರ್ ಸ್ವಾಗತಿಸಿ, ವಂದಿಸಿದರು. ಕಾಲೇಜು ಬೋಧಕಿ ಸುಚಿತ್ರ ನಿರೂಪಿಸಿದರು.