ಕಾಪು : ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಹಾಗೂ ಫ್ರೆಂಡ್ಸ್ ಕ್ಲಬ್ ಕಳತ್ತೂರು ಜಂಟಿಯಾಗಿ ಆಯೋಜಿಸಿದ್ದ 78ನೇ ಸ್ವಾತಂತ್ರೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ರಾಜ್ಯ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರಾದ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಧ್ವಜಾರೋಹಣಗೈದರು.
ಈ ಸಂದರ್ಭದಲ್ಲಿ ಕುಶಲ ಶೇಖರ್ ಶೆಟ್ಟಿ ಅಡಿಟೋರಿಯಂನ ಆಡಳಿತ ನಿರ್ದೇಶಕ ಶೇಖರ್ ಬಿ.ಶೆಟ್ಟಿ ಕಳತ್ತೂರು, ಕುತ್ಯಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಜನಾರ್ಧನ್ ಆಚಾರ್ಯ, ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರೋಹಿತ್,
ರಂಗನಾಥ ಶೆಟ್ಟಿ, ಸುನೀತ ರಂಗನಾಥ ಶೆಟ್ಟಿ, ಅಮರನಾಥ ಶೆಟ್ಟಿ ಪಾಂಗಾಳ, ಸುಂದರ್ ರ ಬಿ. ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಶಶಾಂಕ್ ಮಡಿವಾಳ ವಂದಿಸಿದರು.