ಪಡುಬಿದ್ರಿ ಬಂಟರ ಭವನದಲ್ಲಿ ವೃತ್ತಿ ಅಭಿವೃದ್ಧಿ, ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ
Posted On:
25-08-2024 08:22PM
ಪಡುಬಿದ್ರಿ : ಸಂಸ್ಕೃತಿಯನ್ನು ಅರಿತು ನಮ್ಮ ಮಕ್ಕಳು ಬೆಳೆಯಬೇಕಿದೆ. ಯಶಸ್ಸು ಸಾಧನೆಯ ಹಿಂದೆ ಶ್ರಮವಿರಬೇಕು. ಮೊದಲು ತಂದೆ ತಾಯಿ, ಊರಿನ ದೈವ, ದೇವರು, ಗುರುಗಳ ಆಶೀರ್ವಾದ ಅನಿವಾರ್ಯ. ನಮ್ಮ ಕಾರ್ಯ ಹುಟ್ಟೂರಿಗೆ ಧನ್ಯತೆ ತರಬೇಕಾಗಿದೆ. ವೈಫಲ್ಯ, ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಯಶಸ್ಸು ಸಾಧ್ಯ ಎಂದು ಎಂ ಆರ್ ಜಿ ಗ್ರೂಪ್ ಮುಖ್ಯಸ್ಥ ಡಾ. ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಅವರು ಪಡುಬಿದ್ರಿ ಬಂಟರ ಸಂಘ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ಸಹಯೋಗದಲ್ಲಿ ಭಾನುವಾರ ಪಡುಬಿದ್ರಿ ಬಂಟರ ಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ದಿವ್ಯಾರಾಣಿ ಪ್ರದೀಪ್, ಮೈತ್ರಿ ಮಲ್ಲಿ, ಡಾ. ಸಿ. ಕೆ.ಮಂಜುನಾಥ್, ಡಾ. ಶುಭ, ಡಾ.ಪ್ರವೀಣ್ ಶೆಟ್ಟಿ, ಡಾ. ಸುಧೀರಾಜ್, ಹರೀಶ್ ಜಿ. ಮೊದಲಾದವರು ಮಹಿಳಾ ಸಬಲೀಕರಣ, ಸ್ವ ಉದ್ಯೋಗ, ಕಮ್ಯುನಿಕೇಷನ್ ಸ್ಕಿಲ್, ಇಂಟರ್ವ್ಯೂ ತಯಾರಿ, ಬ್ಯಾಂಕ್ ಸಹಾಯ ವಿಷಯಗಳ ಬಗ್ಗೆ ತರಬೇತಿ ನೀಡಿದರು.
ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘ ದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ ಜೆ. ಶೆಟ್ಟಿ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ ಉಪಸ್ಥಿತರಿದ್ದರು.
ಡಾ.ದೇವಿ ಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್‌ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದರು. ಜಯ ಶೆಟ್ಟಿ ಪದ್ರ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಅಂತಿಮ ವರ್ಷದ ಪೊಲಿಟೆಕ್ನಿಕ್, ಇಂಜಿನಿಯರಿಂಗ್, ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಸುಮಾರು 200 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಯಿತು.