ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಪುರಸಭೆಯ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಆಯ್ಕೆ

Posted On: 28-08-2024 08:15PM

ಕಾಪು : ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಚುನಾವಣಾ ಪ್ರಕ್ರಿಯೆಯ ಮೂಲಕ ಆಯ್ಕೆಯಾಗಿದ್ದಾರೆ. ಆ ಮೂಲಕ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳೆರಡೂ ಬಿಜೆಪಿ ಪಾಲಾಗಿದೆ. 23 ಮಂದಿ ಸದಸ್ಯ ಬಲದ ಕಾಪು ಪುರಸಭೆಯ ಅಧ್ಯಕ್ಷ ಹುದ್ದೆಯು ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಹುದ್ದೆಯು ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಕಟವಾಗಿತ್ತು.

ಅಂತಿಮವಾಗಿ ಅಧ್ಯಕ್ಷರಾಗಿ ಹರಿಣಾಕ್ಷಿ ದೇವಾಡಿಗ ಮತ್ತು ಉಪಾಧ್ಯಕ್ಷರಾಗಿ ಸರಿತಾ ಶಿವಾನಂದ್ ಅವರು 16 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಶೋಭಾ ಎ. ಬಂಗೇರ ಮತ್ತು ಸತೀಶ್ಚಂದ್ರ ಮೂಳೂರು ತಲಾ 9 ಮತ ಗಳಿಸಿದ್ದಾರೆ.‌ ಬಿಜೆಪಿ -12, ಕಾಂಗ್ರೆಸ್ -7, ಎಸ್‌ಡಿಪಿಐ -3, ಜೆಡಿಎಸ್ -1 ಸದಸ್ಯ ಬಲವನ್ನು ಹೊಂದಿದ್ದು, ಶಾಸಕ, ಸಂಸದ ಮತ್ತು ಜೆಡಿಎಸ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ 16 ಮತಗಳನ್ನು ಹೊಂದಿತ್ತು.

ಅಧ್ಯಕ್ಷ ಹುದ್ದೆಗೆ ಬಿಜೆಪಿಯೊಳಗೆ ನಾಲ್ಕು ಮಂದಿಗೆ ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಹರಿಣಾಕ್ಷಿ ದೇವಾಡಿಗ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸಿದ್ದು, ಉಪಾಧ್ಯಕ್ಷ ಹುದ್ದೆಗೆ ಎಸ್.ಡಿ.ಪಿ.ಐ ನಿಂದ ಬಿಜೆಪಿಗೆ ಪಕ್ಷಾಂತರಗೊಂಡ ಸರಿತಾ ಶಿವಾನಂದ್ ಸ್ಪರ್ಧಿಸಿದ್ದರು. ಕಾಪು ತಹಶೀಲ್ದಾರ್ ಡಾ.‌ಪ್ರತಿಭಾ‌ ಆರ್. ಚುನಾವಣಾಧಿಕಾರಿಯಾಗಿ ಚುನಾವಣೆ ನಡೆಸಿಕೊಟ್ಟರು.