ಉಚ್ಚಿಲ : ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ-ಕರ್ನಾಟಕ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ತುಮಕೂರು, ಕರ್ನಾಟಕ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸಭಾಧ್ಯಕ್ಷ ಮತ್ತು ಎಸ್ ಎ ಎಸ್ ಎಸ್ ರಾಷ್ಟ್ರೀಯ ಅಧ್ಯಕ್ಷ ಪಿ. ಬಿ. ಶೇಖರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಎಸ್ ಎ ಎಸ್ ಎಸ್ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕಾಪು ತಾಲೂಕು ಗೌರವಾಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಗೌರವ ಸಲಹೆಗಾರ ಆನಂದ ಸಿ. ಸುವರ್ಣ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಮತ್ತು ಉಡುಪಿ ಜಿಲ್ಲಾ ಮಾಜಿ ಲಯನ್ಸ್ ಗವರ್ನರ್ ಎನ್ ಎಮ್ ಹೆಗ್ಡೆ, ರಾಜ್ಯಾಧ್ಯಕ್ಷರಾದ ಡಾ.ಜಯರಾಮ್, ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಎಸ್. ಎನ್ ಕೃಷ್ಣಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಮದ್ಯ ಪ್ರಾಂತ ಪ್ರಧಾನ ಕಾರ್ಯದರ್ಶಿ ಎಚ್. ಆರ್. ಸಂಪತ್ ಕುಮಾರ್, ಉಡುಪಿ ಜಿಲ್ಲಾ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಮೆಂಡನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಗಣೇಶ್ ಕೋಟ, ಕಾಪು ತಾಲೂಕು ಅಧ್ಯಕ್ಷ ರಘುರಾಮ್ ಎಂ ಶೆಟ್ಟಿ ಕೊಪ್ಪಲಂಗಡಿ, ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ ಮಲ್ಲಾರ್,ಎಸ್ ಎ ಎಸ್ ಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಗಣೇಶ್ ಪೋದುವಾಳ್, ಉಡುಪಿ ಜಿಲ್ಲಾ ಮಹಿಳಾ ಅಧ್ಯಕ್ಷೆ ತಾರಾ ಯು. ಆಚಾರ್ಯ ಹಾಗೂ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಂದರ್ ಗುರುಸ್ವಾಮಿ ಪ್ರಾರ್ಥಿಸಿದರು. ರಾಧಾಕೃಷ್ಣ ಮೆಂಡನ್ ಸ್ವಾಗತಿಸಿದರು. ವಿಜಯ್ ಕೊಡವೂರು ಪ್ರಸ್ತಾವಿಕವಾಗಿ ಮಾತನಾಡಿದರು. ರಂಜಿತ್ ಶೆಟ್ಟಿ ವಂದಿಸಿದರು. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.