ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಸಿಎ ಸೊಸೈಟಿ : ಪಲಿಮಾರು ಶಾಖೆಯ ನೂತನ ಕಟ್ಟಡ ಸಹಕಾರ ಸಂಕೀರ್ಣ ; ನವೀಕೃತ ಹವಾನಿಯಂತ್ರಿತ ಶಾಖೆ ಲೋಕಾರ್ಪಣೆ

Posted On: 10-09-2024 11:39AM

ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇದರ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಉದ್ಘಾಟನೆಗೊಂಡಿತು.

ನೂತನ ಶಾಖೆಯ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಸಂಸ್ಥೆಯ ಅಭಿವೃದ್ಧಿಯ ಜೊತೆಗೆ ಸದಸ್ಯರಿಗೆ ಪ್ರೋತ್ಸಾಹ, ರೈತರು, ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುವ ಮೂಲಕ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಜನರ ಸಂಸ್ಥೆಯಾಗಿ ಬೆಳೆದು ನಿಂತಿದೆ. ಇಂತಹ ಸೇವೆಯ ಮೂಲಕವೇ ವಾಣಿಜ್ಯ ಬ್ಯಾಂಕ್‌ಗಳಿಂದ ವಿಮುಖರಾಗಿ ಜನರು ಸಹಕಾರ ಸಂಸ್ಥೆಗಳಲ್ಲಿ ಮುಖ ಮಾಡುವಂತಾಗಿದೆ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಮಾದರಿ ಶಾಖೆಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ. ಆರ್. ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್, ಮಂಗಳೂರು ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಅಧ್ಯಕ್ಷ ಮತ್ತು ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಬಿ. ಜಯಕರ ಶೆಟ್ಟಿ, ಉಡುಪಿ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ. ಆರ್, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ, ಕುಂದಾಪುರ ಉಪವಿಭಾಗ ಸುಕನ್ಯ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನಿರ್ದೇಶಕರಾದ ಡಾ। ಐಕಳಬಾವ ದೇವಿಪ್ರಸಾದ್ ಶೆಟ್ಟಿ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕ ಕುಂದಾಪುರ ಉಪ ವಿಭಾಗ ಕುಮಾರ್ ಎಸ್. ವಿ., ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಯೇಶ್ವರ, ಮಹಾಲಿಂಗೇಶ್ವರ ದೇವಸ್ಥಾನ, ಪಲಿಮಾರು ಪ್ರಧಾನ ಆರ್ಚಕ ಶ್ರೀನಿವಾಸ ಉಡುಪ, ಪಲಿಮಾರು ಚಚ್೯ ಧರ್ಮಗುರು ವಂದನೀಯ ಜೆರಾಲ್ಡ್ ಸಂದೀಪ್ ಡಿಮೆಲ್ಲೊ, ಮಾಜಿ ತಾಲೂಕು ಪಂಚಾಯತ್ ಸದಸ್ಯರು ಲಕ್ಷ್ಮಣ ಶೆಟ್ಟಿ, ದಿನೇಶ್ ಕೋಟ್ಯಾನ್, ಡಾ. ಪ್ರಭಾ ನಂಬಿಯಾರ್, ಪಲಿಮಾರು ಹಾಜಿ ಎಂ.ಪಿ ಶೇಕಬ್ಬ, ಪಲಿಮಾರು ದಿನೇಶ್ ಪ್ರಭು, ಸಿ ಎ ಸೊಸೈಟಿ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಶಾಖಾ ವ್ಯವಸ್ಥಾಪಕಿ ಶೋಭ ಎಚ್ ಪುತ್ರನ್, ಸೊಸೈಟಿಯ ನಿರ್ದೇಶಕರುಗಳಾದ ರಸೂಲ್ ವೈ.ಜಿ, ಗಿರೀಶ್ ಪಲಿಮಾರು, ಮಾಧವ ಆಚಾರ್ಯ, ರಾಜಾರಾಮ್ ರಾವ್, ಸ್ಟ್ಯಾನಿ ಕ್ವಾಡ್ರಸ್, ಕುಸುಮ ಪುತ್ರನ್, ಕಾಂಚನಾ, ಸುಚರಿತ ಎಲ್ ಅಮೀನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಿಶ್ಮಿತಾ ಪಿ.ಎಚ್ ಉಪಸ್ಥಿತರಿದ್ದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಿ ಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು.