ಕಾಪು : ಪ್ರವಾದಿ ಮುಹಮ್ಮದ್ (ಸ) ಲೇಖನ ಸಂಕಲನ ಬಿಡುಗಡೆ, ವಿಚಾರ ಮಂಡನೆ
Posted On:
22-09-2024 03:15PM
ಕಾಪು : ಯಾವ ವ್ಯಕ್ತಿ ಚಾರಿತ್ರ್ಯವಂತನಾಗಿರುತ್ತನೋ, ಅವರ ವ್ಯಕ್ತಿತ್ವ ಉನ್ನತ ಮಟ್ಟದಲ್ಲಿ ಇರುತ್ತದೆ. ಇದಕ್ಕೆ ಉದಾಹರಣೆ 1500 ವರ್ಷಗಳ ಹಿಂದೆ ಅರೇಬಿಯಾದಲ್ಲಿ, ಪ್ರವಾದಿಯಾಗಿ ಮುಹಮ್ಮದ್ ರವರು ನಿಯುಕ್ತಿಗೊಂಡು ಬಾಳಿ, ಬದುಕಿ, ಜನರನ್ನು ಅಂಧಕಾರದಿಂದ ಬೆಳಕಿಗೆ ತಂದು ಸಮಾಜದ ಜನರ ಬದುಕನ್ನು ಬದಲಾಯಿಸಿದ ಕೀರ್ತಿ ಮತ್ತು ಹೆಸರು ಇಂದಿನ ತನಕವೂ ಅಜರಾಮರವಾಗಿದೆ. ಆ ನಿಟ್ಟಿನಲ್ಲಿ ಅಜಾನ್ ಆದಾಗ ಹೆಗಲಿಗೆ ಹೆಗಲು ಕೊಟ್ಟು ಒಂದುಗೂಡಿಸಲು ಕಲಿಸಿದ ಧರ್ಮ ಪ್ರಜಾಪ್ರಭುತ್ವದ ಧರ್ಮ ಆಗಿದೆ. ಅದೇ ಇಸ್ಲಾಮ್ ಧರ್ಮ ಎಂದು ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಹೇಳಿದರು.
ಅವರು ಜಮಾ ಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲದ ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಸೀರತ್ ಅಭಿಯಾನದ ಅಂಗವಾಗಿ ಕಾಪು ಹೋಟೆಲ್ ಕೆ. ಒನ್ ಸಭಾಂಗಣದಲ್ಲಿ, ಪ್ರವಾದಿ ಮುಹಮ್ಮದ್ ಸ. ಲೇಖನ ಸಂಕಲನ ಪುಸ್ತಕ ಬಿಡುಗಡೆಯ ವಿಚಾರ ಮಂಡನೆಯ ಸಭೆಯಲ್ಲಿ ಹೇಳಿದರು.
ಮಣಿಪಾಲ ಎಮ್. ಐ. ಟಿಯ ಅಸೋಸಿಯೇಟ್ ಪ್ರೊಫೆಸರ್ ಡಾ | ಜಮಾಲುದ್ದಿನ್ ಹಿಂದಿರವರು ಮಾತನಾಡಿ, ಈ ಹಿಂದೆ ಜನರ ಕಲ್ಯಾಣಕ್ಕಾಗಿ ಆಗಮನಿಸಿದ ಮಹಾ ಪುರುಷರ ಸಂದೇಶಗಳನ್ನು ಪಾಲಿಸುವುದು ಬಿಟ್ಟು ಅವರನ್ನು ಆರಾಧಿಸತೊಡಗಿದರು. ಇದರ ಅಂಗವಾಗಿ ವರ್ಷಕೊಮ್ಮೆ ಅವರ ಜಯಂತಿ ಮಾಡಿ ಪುಣ್ಯ ಸಂಪಾದಿಸಿದೆವು ಎಂದು ತಿಳಿದುಕೊಂಡ ಕಾರಣ , ಸಮಾಜದಲ್ಲಿ ಯಾವುದೇ ನೈತಿಕತೆ, ನ್ಯಾಯ, ಆದರ್ಶ,ನಿಬಂಧನೆ ಉಳಿದಿಲ್ಲ.
ಆ ಕಾರಣ ಇಂದಿನ ಪೀಳಿಗೆಗೆ ಯಾರೂ ರೋಲ್ ಮಾಡೆಲ್ ಗಳು ಸಿಗದೆ ತಮ್ಮ ಬದುಕನ್ನು ಕತ್ತಲೆಯೆಡೆಗೆ ಕೊಂಡೊಯ್ಯುತಿದ್ದಾರೆ.
ಈ ನಿಟ್ಟಿನಲ್ಲಿ ಮತ್ತೊಮ್ಮೆ ಪ್ರವಾದಿ ಮುಹಮ್ಮದ್ ಸ. ಅ. ಸ. ರವರ ಜೀವನ ಮತ್ತು ಸಂದೇಶದ ಪರಿಚಯ ಆಗ ಬೇಕಾಗಿದೆ. ಈ ಕೆಲಸವನ್ನು ಜಮಾ ಅತೆ ಇಸ್ಲಾಮೀ ಹಿಂದ್ ಭಾರತಾದ್ಯಾದಂತ ಮಾಡುತ್ತಾ ಬರುತ್ತಿದೆ ಎಂದರು.
ಜಮೀಯತುಲ್ ಫಲಾಹ್ ಕಾಪು ಘಟಕದ ಅಧ್ಯಕ್ಷರಾದ ಶಬೀಹ್ ಅಹಮದ್ ಕಾಝೀ ಯವರು, ಪ್ರವಾದಿ ಮುಹಮ್ಮದ್ (ಸ ) ರ ಲೇಖನ ಸಂಕಲನ ಬಿಡುಗಡೆಗೊಳಿಸಿದರು.
ಜಮಾ ಅತೆ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲಾ ಸಂಚಾಲಕರು ಆದ ಡಾ | ಅಬ್ದುಲ್ ಅಜಿಜ್ ರವರು ಮಾತನಾಡಿದರು.
ಮುಹಮ್ಮದ್ ರಾಯಿಫ್ ರವರ ಕುರ್ ಆನ್ ಪಠಿಸಿ ಅನುವಾದ ಓದಿದರು. ಬ್ರದರ್ ಮುಹಮ್ಮದ್ ಮುಯೀಸ್ ರವರು ಸ್ವಾಗತಿಸಿದರು.
ಜ. ಇ. ಹಿಂದ್ ಕಾಪು ವರ್ತುಲದ ಅಧ್ಯಕ್ಷರು ಅನ್ವರ್ ಅಲಿ ಕಾಪು ಪ್ರಸ್ತಾವನೆಗೈದರು.
ಜ. ಇ. ಹಿಂದ್ ಕಾಪು ವರ್ತುಲದ ಕಾರ್ಯದರ್ಶಿ, ಮುಹಮ್ಮದ್ ಇಕ್ಬಾಲ್ ಸಾಹೇಬ್ ವಂದಿಸಿದರು.
ಬ್ರದರ್ ಅಬ್ದುಲ್ ಖಾಲಿದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ, ಬಿಡುಗಡೆಗೊಂಡ ಪುಸ್ತಕವನ್ನು ಉಚಿತವಾಗಿ ನೀಡಲಾಯಿತು.