ಕಾಪು : ವಿಶ್ವ ಹಿಂದೂ ಪರಿಷದ್ನ ಷಷ್ಠಿಪೂರ್ತಿ ವರ್ಷದ ಪ್ರಯುಕ್ತ ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ವತಿಯಿಂದ ಸೆಪ್ಟೆಂಬರ್ 29, ಭಾನುವಾರ ಸಂಜೆ 3 ಗಂಟೆಗೆ ಬಂಟರ ಭವನ ಪಡುಬಿದ್ರಿ ಇಲ್ಲಿ ಹಿಂದೂ ಸಮಾವೇಶ ಜರಗಲಿದೆ.
ಸಂಜೆ ಗಂಟೆ 3:30ರಿಂದ ಧಾರ್ಮಿಕ ಚಿಂತಕ ಶಶಿಧರ ಶೆಟ್ಟಿ ಎರ್ಮಾಳು ಅಧ್ಯಕ್ಷತೆಯಲ್ಲಿ
ಸಭಾಕಾರ್ಯಕ್ರಮ ಜರಗಲಿದ್ದು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವಿಶ್ವ ಹಿ೦ದೂ ಪರಿಷದ್ ರಾಜ್ಯ ಕಾರ್ಯಕಾರಿಣಿ ಸದಸ್ಯ ರಘು ಸಕಲೇಶಪುರ ಇವರ ದಿಕ್ಸೂಚಿ ಭಾಷಣ ಮಾಡಲಿದ್ದು, ಅತಿಥಿಗಳಾಗಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ (ರಿ.) ಉಡುಪಿ ಜಿಲ್ಲಾ ಉಪಾಧ್ಯಕ್ಷ
ಗೋಪಾಲ ಪೂಜಾರಿ ಶಿರ್ವ, ದೈವ ನರ್ತಕ ಸುಧಾಕರ ಪಾಣಾರ ಮೂಡುಬೆಳ್ಳೆ, ಕಾಪು ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷ ಅಪ್ಪಿಸಾಲ್ಯಾನ್, ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು (ಪ್ರಖಂಡ) ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.