ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ ಸಹಯೋಗದೊಂದಿಗೆ 3ನೇ ಬಾರಿಗೆ
ಅಕ್ಟೋಬರ್ 3ರಿಂದ 12ರವರೆಗೆ ನಡೆಯಲಿರುವ ಉಡುಪಿ ಉಚ್ಚಿಲ ದಸರಾ-2024ಕ್ಕೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿಯವರು ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಈ ಬಾರಿಯ ಉಡುಪಿ ಉಚ್ಚಿಲ ದಸರಾ ಹಬ್ಬಕ್ಕೆ ಚಾಲನೆ ನೀಡಲಾಗಿದೆ. ತಾಯಿ ಶಾರದೆ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಸಭಾಂಗಣದಲ್ಲಿಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಗಿದೆ. ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರು ಪ್ರತಿಷ್ಠಾಪನಾ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.
ಸನ್ಮಾನ : ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್‌ರವರು ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಶಾರದಾ ಮಾತೆಯ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ದಸರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆಯ ಜೊತೆಗೆ ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭವೂ ನೆರವೇರಿತು.
ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್., ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ವಿನಯ ಕರ್ಕೆರ ಮಲ್ಪೆ, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಶಿಲ್ಪ ಜಿ. ಸುವರ್ಣ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.