ಪಡುಬಿದ್ರಿ : ಉಡುಪಿ - ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗುರುವಾರ ಪಡುಬಿದ್ರಿಯ ಉದಯಾದ್ರಿ ಸಭಾಭವನದಲ್ಲಿ ಹೆಜಮಾಡಿ, ಪಡುಬಿದ್ರಿ, ಪಲಿಮಾರು, ಮುದರಂಗಡಿ, ಎಲ್ಲೂರು, ತೆಂಕ, ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಭೆಯು ಜರಗಿತು
ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಅಭ್ಯರ್ಥಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಅಭ್ಯರ್ಥಿ ಪ್ರಮುಖ್ ಅರುಣ್ ಶೆಟ್ಟಿ ಪಾದೂರು, ಅಭ್ಯರ್ಥಿ ಪ್ರವಾಸ ಪ್ರಮುಖ್ ರಾಜೇಶ್ ಕಾವೇರಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.