ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ
Posted On:
24-10-2024 07:39PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಸ್ವರ್ಣ ಜುವೆಲರ್ಸ್ ನ ಪ್ರಬಂಧಕ ಲಕ್ಷ್ಮೀ ನಾರಾಯಣ್ ಮತ್ತು ಸುನಿಲ್ ಜಿ ಅವರಿಗೆ ಗುರುವಾರದಂದು ಚಿನ್ನ ಮತ್ತು ಬೆಳ್ಳಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್. ಪಾಲನ್, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚಂದ್ರಶೇಖರ್ ಅಮೀನ್, ಪ್ರಚಾರ ಸಮಿತಿ ಸಂಚಾಲಕ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಚೇರಿ ನಿರ್ವಾಹಕ ಜಯರಾಮ್ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರೀ, ನವದುರ್ಗಾ ಲೇಖನ ಯಜ್ಞ ಸಮಿತಿಯ ಸಂಚಾಲಕ ದಾಮೋದರ ಶರ್ಮಾ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅ. 29ರವರೆಗೆ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಅವಕಾಶ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಭಕ್ತಾದಿಗಳಿಂದ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂನ್ 25ರಂದು ಚಾಲನೆ ನೀಡಲಾಗಿತ್ತು, ಅಕ್ಟೋಬರ್ 3 ರಂದು ಮುಹೂರ್ತ ನೆರವೇರಿಸಲಾಗಿತ್ತು. ಸಮಿತಿಯ ನಿರೀಕ್ಷೆಯಂತೆ ಭಕ್ತರು ಈಗಲೂ ಚಿನ್ನ ಮತ್ತು ಬೆಳ್ಳಿಯನ್ನು ನೀಡುತ್ತಿದ್ದು, ಅಕ್ಟೋಬರ್ 29ರವರೆಗೆ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಅವಕಾಶವಿದ್ದು, ಸ್ವರ್ಣ ಗದ್ದುಗೆಯ ಕೆಲಸ ಪ್ರಗತಿಯಲ್ಲಿದೆ.
ಸುಮಾರು 20 ಕೆಜಿ ಚಿನ್ನ, 180 ಕೆಜಿ ಬೆಳ್ಳಿಯೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸ್ವರ್ಣ ಗದ್ದುಗೆಗೆ ಭಕ್ತರಿಂದ ಈಗಾಗಲೇ 11 ಕೆಜಿ ಚಿನ್ನ, 36 ಕೆಜಿ ಬೆಳ್ಳಿ ಸಮರ್ಪಣೆಯಾಗಿದೆ. ಪ್ರಪಂಚದಾದ್ಯಂತ ಇರುವ ಭಕ್ತರಿಂದ ಮತ್ತಷ್ಟು ಚಿನ್ನ ಸಮರ್ಪಣೆಗೊಳ್ಳುವ ನಿರೀಕ್ಷೆಯಿದ್ದು ಭಕ್ತರು ಆದಷ್ಟು ಶೀಘ್ರದಲ್ಲಿ ಸ್ವರ್ಣ ಮತ್ತು ಬೆಳ್ಳಿ ಸಮರ್ಪಿಸಬಹುದಾಗಿದೆ ಎಂದು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ ಮುಂಬಯಿ ತಿಳಿಸಿದ್ದಾರೆ.