ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಕುಣಿತ ಭಜನಾ ಸ್ಪರ್ಧೆ
Posted On:
27-10-2024 11:44AM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅ.29ರಂದು ನಡೆಯಲಿರುವ ವಾಗೀಶ್ವರಿ ಪೂಜೆ ಹಾಗೂ ನವದುರ್ಗಾ ಲೇಖನ ಯಜ್ಞದ ಲೇಖನಕ್ಕೆ ಚಾಲನೆ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಮೂರು ಜಿಲ್ಲೆಗಳ 15 ತಂಡಗಳಿಂದ ನಡೆದ ಕುಣಿತ ಭಜನಾ ಸ್ಪರ್ಧೆಯನ್ನು ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಕಾಪು
ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಈಗಾಗಲೇ 108 ತಂಡಗಳಿಂದ ಭಜನೆ ನಡೆದಿದೆ. ಮುಂದೆಯೂ ಶ್ರೀ ದೇವಳದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಶ್ರೀ ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು.
ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ರವಿಕಿರಣ್, ಉಪಾಧ್ಯಕ್ಷ ಮಾಧವ ಆರ್. ಪಾಲನ್, ಶ್ರೀ ನವದುರ್ಗಾ ಲೇಖನ ಯಜ್ಞ ಸಮತಿ ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಕೋಶಾಧಿಕಾರಿ ವಿಶ್ವನಾಥ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಭಜನೆಯ ಉಸ್ತುವಾರಿಗಳಾದ ಸಂತೋಷ್ ಶೆಟ್ಟಿ ಮಂಗಳೂರು, ರಮೇಶ್ ಕಲ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.
ವಿದ್ವಾನ್ ದಾಮೋದರ ಶರ್ಮ ಬಾರ್ಕೂರು ಮತ್ತು ಮನೋಜ್ ವಾಮಂಜೂರು ನಿರೂಪಿಸಿದರು.