ನ. 16 -17 : ಎರಡು ದಿನಗಳ ಉದ್ಯೋಗ ಮೇಳ
Posted On:
02-11-2024 04:16PM
ಕಾಪು : ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ, ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ವತಿಯಿಂದ 3 ನೇ ಬಾರಿ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್ 16 ಮತ್ತು 17 ರಂದು ಎಂ ಆರ್ ಜಿ ಗ್ರೂಪ್ ಪ್ರಯೋಜಕತ್ವದಲ್ಲಿ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ನಡೆಯಲಿದೆ ಎಂದು ಗ್ರಾಮೀಣ ಬಂಟರ ಸಂಘದ ಟ್ರಸ್ಟ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಶನಿವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 16 ರಂದು ಬೆಳಿಗ್ಗೆ 9:45 ಕ್ಕೆ ಎಂ ಆರ್ ಜಿ ಗ್ರೂಪ್ ಛೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಉದ್ಘಾಟನೆ ಮಾಡಲಿದ್ದು, ಗಣ್ಯರು, ಸಂಸದರು, ಶಾಸಕಕರು, ಮಾಜಿ ಶಾಸಕರು ಮತ್ತು ಮಂತ್ರಿಗಳು, ವಿವಿಧ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಸಮಾರೋಪ ನ.17 ರಂದು ಬೆಳಿಗ್ಗೆ 11:45 ಕ್ಕೆ ನಡೆಯಲಿದೆ.
ಎರಡು ಬಾರಿ ನಡೆದ ಉದ್ಯೋಗ ಮೇಳದಲ್ಲಿ 1,300 ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳಿಗೆ ಉತ್ತಮ ಕಂಪನಿಗಳಲ್ಲಿ ಉದ್ಯೋಗ ಸಿಕ್ಕಿದೆ. 30 ಕಂಪನಿಗಳು ಬರಲಿದ್ದು, ಈ ಬಾರಿ 1,200 ರಿಂದ 1,500 ಅಭ್ಯರ್ಥಿಗಳಿಗೆ ಉದ್ಯೋಗ ಸಿಗಬಹುದೆಂಬ ನಿರೀಕ್ಷೆಯಿದೆ. ರಿಜಿಸ್ಟ್ರೇಷನ್ ಉಚಿತವಾಗಿದೆ.
ಐಟಿ, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಮತ್ತು ಇನ್ನಿತರ ಬ್ರಾಂಚ್ ನಲ್ಲಿ ಇಂಜಿನಿಯರಿಂಗ್, ಡಿಪ್ಲೊಮ ಮತ್ತು ಐಟಿಐ ಮಾಡಿದ ಮತ್ತು ಅಂತಿಮ ವರ್ಷದಲ್ಲಿ ಕಲಿಯುತ್ತಿರುವ ಅಭ್ಯರ್ಥಿಗಳಿಗೆ ಇಂಟರ್ವ್ಯೂ ನಲ್ಲಿ ಭಾಗವಹಿಸಲು ಅವಕಾ ಗಳಿವೆ. ಈಗ ರಿಜಿಸ್ಟರ್ ಮಾಡಿದ ಕಂಪನಿ ಗಳ ಪ್ರಕಾರ ಸುಮಾರು 1000 ಹುದ್ದೆಗಳಿಗೆ ಇಂಜಿನಿಯರಿಂಗ್ ಫೀಲ್ಡ್ ನಲ್ಲಿ ಅವಕಾಶಗಳಿವೆ. ಬಿ. ಎ. ಬಿ. ಕಾಮ್, ಬಿ.ಎಸ್ಸಿ, ಬಿ. ಬಿಎಂ, ಬಿ. ಸಿ. ಎ ಮತ್ತು ಇನ್ನಿತರ ಡಿಗ್ರಿ ಮಾಡಿದವರಿಗೆ ಮತ್ತು ಎಂ. ಸಿ. ಎ, ಎಂ. ಬಿ. ಎ, ಎಂ. ಎಸ್ಸಿ, ಮಾಡಿದ ಅಭ್ಯರ್ಥಿಗಳಿಗೆ ಸುಮಾರು 500 ಕ್ಕಿಂತಲೂ ಹೆಚ್ಚು ಹುದ್ದೆ ಗಳಿಗೆ ಅವಕಾಶ ಗಳಿವೆ. ಇಂಟರ್ವ್ಯೂ ಒಳ್ಳೆದು ಮಾಡುವ ಅಭ್ಯರ್ಥಿ ಗಳಿಗೆ ಒಳ್ಳೆಯ ಕಂಪನಿಗಳಲ್ಲಿ ಉದ್ಯೋಗ ಸಿಗುವ ಸದವಕಾಶ ಇದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ 5 ಕಂಪನಿಗಳಲ್ಲಿ ಇಂಟರ್ವ್ಯೂನಲ್ಲಿ ಭಾಗವಹಿಸಲು ಅವಕಾಶವಿದೆ. ಉಡುಪಿ ಮತ್ತು ದ.ಕ. ಜಿಲ್ಲೆಯ ನಿರುದ್ಯೋಗಿ ಯುವಕರು, ಯುವತಿಯರು ಉದ್ಯೋಗ ಮೇಳದ ಪ್ರಯೋಜನ ಪಡೆಯಲು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರೋಗ್ರಾಮ್ ಡೈರೆಕ್ಟರ್ ಪ್ರೊ. ದಿವ್ಯ ರಾಣಿ ಪ್ರದೀಪ್, ಇಂಟರ್ವ್ಯೂ ಸಮಿತಿ ಛೇರ್ಮನ್ ಗುರು ಪ್ರಶಾಂತ್, ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ, ಎಚ್ ಬಿ ಶೆಟ್ಟಿ, ದಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.