ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಆಯೋಜಿಸಿದ್ದ ಐ ಆ್ಯಮ್ ಸೇವಿಂಗ್ ಮೈ ಬೀಚ್ ಕಾರ್ಯಕ್ರಮದ ಅಂಗವಾಗಿ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲುಕ್ ಪಂಚಾಯತ್ ನಿಕಟಪೂರ್ವಾಧ್ಯಕ್ಷೆ ನೀತಾ ಗುರುರಾಜ್, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂನ ಅಧ್ಯಕ್ಷ ಮನೋಹರ್ ಶೆಟ್ಟಿ, ಸುಕುಮಾರ್ ಶ್ರೀಯಾನ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯಕ್, ಬ್ಲೂ ಫ್ಲ್ಯಾಗ್ ಬೀಚಿನ ಪ್ರಬಂಧಕ ವಿಜಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.