ಪಡುಬಿದ್ರಿ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪಡುಬಿದ್ರಿ ವ್ಯಾಪ್ತಿಯ ಎಲ್ಲಾ ಸಮುದಾಯದ ವತಿಯಿಂದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಆದಿತ್ಯವಾರ ಜರಗಿದ ಪೂರ್ವಭಾವಿ ಸಭೆಯನ್ನು 9 ಸಮುದಾಯದ 9 ಜನ ಮಹಿಳೆಯರಿಂದ 9 ನವದುರ್ಗ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಮಾಜಿ ಶಾಸಕ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರು ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ ದೇವಳದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ವೈ. ಶಶಿಧರ್ ಶೆಟ್ಟಿ, ವಿಶು ಕುಮಾರ್ ಶೆಟ್ಟಿಬಾಲ್, ವೈ ಸುಧೀರ್ ಕುಮಾರ್, ವಿಷ್ಣುಮೂರ್ತಿ, ಶಶಿಕಾಂತ್ ಪಡುಬಿದ್ರಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂಪತ್ ಕುಮಾರ್, ಸುಕುಮಾರ್ ಶ್ರೀಯಾನ್ ಸುಧಾಕರ್ ಮಡಿವಾಳ, ಭರತ್ ದೇವಾಡಿಗ, ಮುಂಡಾಳ ಗೊಡ್ಡ ಸಮಾಜದ ಪ್ರಮುಖರು, ಅರುಣ್ ಶೆಟ್ಟಿ ಪಾದೂರು, ಶೇಖರ ಶೆಟ್ಟಿ ಕಲ್ಯ, ಪ್ರಭಾಸ್ ಶೆಟ್ಟಿ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ವಿಶ್ವನಾಥ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಅನಿತಾ ವಿಶು ಕುಮಾರ್ ಪ್ರಾರ್ಥಿಸಿದರು. ಹೊಸಮಾರಿಗುಡಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ ಬ್ರಹ್ಮಕಲಶೋತ್ಸವದ ಬಗ್ಗೆ ವಿವರಿಸಿದರು. ಯೋಗಿಶ್ ಶೆಟ್ಟಿ ಬಾಲಾಜಿ ಪ್ರಸ್ತಾವಿಸಿದರು. ಮುರಳಿನಾಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.