ಪಡುಬಿದ್ರಿ : ಕ್ರೀಡಾ ಸ್ಫೂರ್ತಿಯ ಗುಣಲಕ್ಷಣಗಳನ್ನು ದೃೆನಂದಿನ ಜೀವನಕ್ಕೆ ಅನ್ವಯಿಸಿದರೆ ಮೃೆದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ, ಸೌಹಾರ್ದತೆ ಪಂದ್ಯಕೂಟವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು.
ಅವರು ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ನಡೆಯುವ "ಕಡಲ್ ಫಿಶ್ 2024" ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಡಲ್ ಫಿಶ್ ಕ್ರಿಕೆಟರ್ಸ್ ಸ್ಥಾಪಕ ಅಧ್ಯಕ್ಷ ಚೇತನ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಶ್ರೀಲಂಕಾ ಹಾಗು ಭಾರತ ಟೆನ್ನಿಸ್ ಬಾಲ್ ತಂಡದ ನಡುವೆ ಉದ್ಘಾಟನ ಪಂದ್ಯಾಟ ನಡೆಯಿತು.
ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್ , ಪಡುಬಿದ್ರಿ ಕಲ್ಲಟ್ಟೆ ಶ್ರೀ ಧರ್ಮ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಶರತ್ ಶೆಟ್ಟಿ , ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ , ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾ ಅಧ್ಯಕ್ಷ ವಿಶ್ವಾಸ್ ಅಮೀನ್, ಸುರತ್ಕಲ್ ತುಳುನಾಡ ಬಿರುವೆರ್ ಸಂಸ್ಥಾಪಕ ಲೊಕೇಶ್ ಕೊಡಿಕೆರೆ, ಪಡುಬಿದ್ರಿ ಬಂಟರ ಸಂಘ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕಾಪು ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ಶೆಟ್ಟಿ, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು , ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಾಜಿ ನಿರ್ದೇಶಕ ಮಿಥುನ್ ಹೆಗ್ಡೆ, ಪಡುಬಿದ್ರಿ ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಪೂಜಾರಿ, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ, ಉದ್ಯಮಿ ಅಶ್ವಿನ್ ಕೋಟ್ಯಾನ್, ಕಡಲ್ ಫಿಶ್ ಕ್ರಿಕೆಟರ್ಸ್ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಅಧ್ಯಕ್ಷ ರಚನ್ ಸಾಲ್ಯಾನ್, ಬಾಡಿ ಬಿಲ್ಡರ್ ವಿರಾಜ್ ಸುರತ್ಕಲ್, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಪ್ರೇಮ ವಾಸುದೇವ್ ಉಪಸ್ಥಿತರಿದ್ದರು.
ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪ್ರಶಾಂತ್ ಸಾಲ್ಯಾನ್ ವಂದಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು.