ಕಾಪು : 2025ರ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಅಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಇವರು ನ್ಯಾಯಾಧೀಶರಿಗೆ ಅಮ್ಮನ ಅನುಗ್ರಹ ಪ್ರಸಾದ ನೀಡಿ ಹರಸಿದರು. ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು ವೀಕ್ಷಿಸಿದ ನ್ಯಾಯಾಧೀಶರಿಗೆ ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನವಿತ್ತರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ಉಡುಪಿಯ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಪ್ರಮುಖರಾದ ಮೋಹನ್ ಬಂಗೇರ, ಸಂತೋಷ್ ಶೆಟ್ಟಿ ತೆಂಕರಗುತ್ತು, ಅರುಣ್ ಶೆಟ್ಟಿ ಪಾದೂರು, ಶೋಭಿತ್ ಶೆಟ್ಟಿ, ಮಧುಕರ್ ಎಸ್., ಉದಯ ಭಾರ್ಗವ, ಸಂತೋಷ್ ಶೆಟ್ಟಿ ಕಾಪು, ಜಯಕರ ಶೆಟ್ಟಿಗಾರ್, ಶಿವಣ್ಣ ಎಸ್.ಅಂಚನ್, ಸಂದೀಪ್ ಕುಮಾರ್, ಸೋಮನಾಥ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.