ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ : ಮಹಾಸಭೆ, ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ

Posted On: 01-12-2024 05:01PM

ಉದ್ಯಾವರ : ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ (ರಿ.) ಪಿತ್ರೋಡಿ ಉದ್ಯಾವರ ಇದರ ಮಹಾಸಭೆ, ದಿl ಯು. ಸದಿಯ ಸಾಹುಕಾರರ ಸ್ಮರಣಾರ್ಥ 14 ಗ್ರಾಮ ಸಭೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ಭಾನುವಾರ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಸಭಾಂಗಣದಲ್ಲಿ ಜರಗಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಕೇಶವ ಎಂ. ಕೋಟ್ಯಾನ್, ಸಾಹುಕಾರ್ ಕ್ಯಾನಿಂಗ್ ಕಂ. ಮಾಲಕರಾದ ಯು. ಗಣೇಶ್, ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾl ಅಶೋಕ್, ಗುರಿಕಾರರಾದ ಸದಾರಾಮ್ ಮೆಂಡನ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.