ಕಾಪು : ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಕಾಪು ಕೊಪ್ಪಲಂಗಡಿಯ ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಹೆಜಮಾಡಿಯಿಂದ ಬೈಂದೂರುವರೆಗಿನ NH: 66 ಹೆದ್ದಾರಿಯ ಅಂಚುಗಳು ಮತ್ತು ಗುಂಡಿಗಳು ದುಃಸ್ಥಿತಿಯಲ್ಲಿದ್ದು, ಇದು ಪ್ರಯಾಣಿಕರ ಸುರಕ್ಷತೆಗೆ ಗಮನಾರ್ಹ ಅಪಾಯವನ್ನುಂಟು ಮಾಡಿದೆ.
ರಸ್ತೆಯ ಸ್ಥಿತಿಯು ಚಾಲಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದು ಮಾತ್ರವಲ್ಲದೆ ಅಪಘಾತಗಳು, ಪಾದಚಾರಿಗಳಿಗೆ, ವಯೋವೃದ್ಧರಿಗೆ, ಶಾಲೆಗೆ ಹೋಗುವ ಮಕ್ಕಳಿಗೆ ಅಪಾಯವನ್ನು ಹೆಚ್ಚಿಸುತ್ತದೆ. ಮೇಲಾಗಿ, ಹಾಳಾದ ರಸ್ತೆ/ಅಂಚುಗಳು, ದಾರಿಗಳು ವಾಹನಗಳಿಗೆ ಹಾನಿಯನ್ನುಂಟು ಮಾಡುತ್ತಿದ್ದು, ಪ್ರಯಾಣಿಕರಿಗೆ ಆರ್ಥಿಕ ನಷ್ಟವನ್ನು ಉಂಟುಮಾಡುತ್ತದೆ. ಸರಿಯಾದ ಬೀದಿ ದೀಪಗಳನ್ನು ಸಹ ಒದಗಿಸಿ.
ಗುಂಡಿಗಳು ಮತ್ತು ಹಾಳಾಗಿರುವ ರಸ್ತೆಯ ಅಂಚುಗಳನ್ನು ಸರಿಪಡಿಸಲು ತಕ್ಷಣ ಕ್ರಮಕೈಗೊಳ್ಳಲು ಪತ್ರದಲ್ಲಿ ವಿನಂತಿಸಿದ್ದಾರೆ.
ರಾತ್ರಿ ಸಂಚರಿಸುವ ವಾಹನಗಳಿಗೆ ರಸ್ತೆಯ ಫಲಕಗಳು ಸರಿಯಾಗಿ ಕಾಣಿಸದೆ ಇರುವುದರಿಂದ, ವಾಹನಗಳಿಗೆ ತೊಂದರೆಯಾಗಿ ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ. ಈ ಬಗ್ಗೆ ಮತ್ತು ಸರ್ವಿಸ್ ರಸ್ತೆಯನ್ನು ಮಾಡಲು ಆಗ್ರಹಿಸಿರುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಯ ಗಮನಕ್ಕೂ ತಂದಿರುತ್ತಾರೆ.