ಕಾಪು : ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡು, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಮಂಗಳವಾರ ಭೇಟಿ ನೀಡಿ, ಸಮಗ್ರ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರದ ಕುರಿತಾಗಿ ಮಾಹಿತಿ ನೀಡಿದರು. ನವದುರ್ಗಾ ಲೇಖನ ಯಜ್ಣದ ಬಗ್ಗೆ ಮಾಹಿತಿ ಪಡೆದು, ಮೆಚ್ಚುಗೆ ವ್ತಕ್ತ ಪಡಿಸಿದ ಅವರು ನವದುರ್ಗಾ ಲೇಖನ ಬರೆಯುವ ಸಂಕಲ್ಪ ಸ್ವೀಕರಿಸಿದರು.
ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಮತ್ತು ಮಾಜಿ ಶಾಸಕ ಕೆ. ರಘುಪತಿ ಭಟ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಕಾಪು, ಮಾಧವ ಆರ್. ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾಽಕಾರಿ ಮತ್ತು ಕೋಶಾಧಿಕಾರಿ ರವಿಕಿರಣ್, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಮನೋಹರ ರಾವ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ಶಶಿಧರ್, ಅಭಿವೃದ್ಧಿ ಸಮಿತಿ ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ರಘುರಾಮ ಶೆಟ್ಟಿ, ಮಧುಕರ್ ಎಸ್., ರಮೇಶ್ ಶೆಟ್ಟಿ ಕೊಲ್ಯ, ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಕಾಪು ಮೊದಲಾದವರು ಉಪಸ್ಥಿತರಿದ್ದರು.