ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಧಾರ್ ಕಾಡ್೯ ಮಾಡಿಸಿ ಮಾನಸಿಕ ಅಸ್ವಸ್ಥರ ಬದುಕಿಗೆ ಬೆಳಕಾದ ಕಾಪು ತಹಶಿಲ್ದಾರ್

Posted On: 20-12-2024 05:55PM

ಕಾಪು : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎರ್ಮಾಳು ಬಡಾ ಗ್ರಾಮದ ಅಕ್ಕಪಕ್ಕದ ಮನೆಯ ಕಿರಣ ಕುಮಾರಿ (52) ಮತ್ತು ಪ್ರಮೋದ (69) ಎಂಬ ಮಹಿಳೆಯರಿಗೆ ಕಾಪು ತಾಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಅವರ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಸಿದ್ದಾರೆ.

ಈ ಈರ್ವರು ಮಹಿಳೆಯರನ್ನು ಆಧಾರ್ ಕೇಂದ್ರಕ್ಕೆ ಕರೆತರಲು ಪೋಷಕರಿಗೆ ಸಾಧ್ಯವಾಗಿರಲಿಲ್ಲ. ಆಧಾರ್ ಕಾರ್ಡ್ ಇಲ್ಲದ ಕಾರಣ ಸರಕಾರದ ಯಾವುದೇ ಯೋಜನೆಗಳು, ಪಿಂಚಣಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

ಕಿರಣಕುಮಾರಿ ಇವರ ತಾಯಿ 75 ವರ್ಷದ ವೃದ್ಧೆ ತಾಯಿ ಮತ್ತು ಪ್ರಮೋದರವರ ಪೋಷಕರು ತಹಶಿಲ್ದಾರರ ಕಚೇರಿಗೆ ಬಂದು ಅಳಲು ತೋಡಿಕೊಂಡಿದ್ದರು. ಇದನ್ನು ಮನಗಂಡು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಆಧಾರ್ ಕೇಂದ್ರವನ್ನೇ ಅವರ ಮನೆಗೆ ಕೊಂಡೊಯ್ಯುವ ಏರ್ಪಾಟು ಮಾಡಿ ಆಧಾರ್ ಕಾಡ್೯ ಮಾಡಿಸಿದ್ದರು. ಪಿಂಚಣಿ ದೊರಕಿಸಿ ಕೊಡುವ ಭರವಸೆಯನ್ನು ನೀಡಿದ್ದಾರೆ.

ಈ ಕಾರ್ಯಕ್ಕೆ ಆಧಾರ್ ಆಪರೇಟರ್ ಸಂಧ್ಯಾ, ಆಧಾರ್ ಕೇಂದ್ರದ ಇಸ್ಮಾಯಿಲ್ ಫಲಿಮಾರು, ಗ್ರಾಮ ಪಂಚಾಯತಿ ಸದಸ್ಯರಾದ ದೀಪಕ್ ಎರ್ಮಾಳ್, ಅಜೀಜ್ ಹೆಜಮಾಡಿ ಸಹಕರಿಸಿದ್ದರು.