ಕಾಪು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಕಾಪು ಶಾಖೆಯ ನೇತೃತ್ವದಲ್ಲಿ ಕಾಪು ರೋಟರಿ ಕ್ಲಬ್‌ನ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ವಿಶ್ವವಿದ್ಯಾಲಯ ದೇರಳಕಟ್ಟೆ ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ನುರಿತ ತಜ್ಞ ವೈದ್ಯರ ತಂಡದಿಂದ ಆದಿತ್ಯವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಾಪು ಶಾಖಾ ವಠಾರದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ ಜರಗಿತು.
ಈ ಸಂದರ್ಭ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು, ಕಾಪು ರೋಟರಿ ಕ್ಲಬ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.