ಕಾಪು : ಸರಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು ಇದರ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರಗಿತು.
ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಶೆಟ್ಟಿ ವಹಿಸಿದ್ದರು.
ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಸ್ಫರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರಗಿತು.
ಈ ಸಂದರ್ಭ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾದ ಮುಸ್ತಾಕ್ ಅಹಮದ್, ಬೆಳಪು ಸ್ಪೋರ್ಟ್ಸ್ ಕ್ಲಬ್ ಬೆಳಪು ಅಧ್ಯಕ್ಷ ಶಾ ನವಾಜ್, ರೋಟರಿ ಕ್ಲಬ್ ಕಾಪು ಅಧ್ಯಕ್ಷ ಬಾಲಕೃಷ್ಣ, ಉದ್ಯಮಿ ರವಿ, ಪ್ರಾಥಮಿಕ ಶಾಲಾ ವಿಭಾಗದ ಎಸ್ಡಿಎಂಸಿ ಅಧ್ಯಕ್ಷ ಚಂದ್ರಹಾಸ, ಎಸ್ ಡಿ ಎಂ.ಸಿ ಸದಸ್ಯರಾದ ಅನುರಾಧ, ಚಂದ್ರಶೇಖರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಬ್ರಾಹಿಂ, ಉಪಾಧ್ಯಕ್ಷ ಮಹೇಶ್ ಉಪಸ್ಥಿತರಿದ್ದರು.
ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಕೆ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನಸೂಯಾ ಇವರು ವಂದಿಸಿದರು. ಪ್ರೌಢ ಶಾಲೆಯ ಶಿಕ್ಷಕ ಸುಧಾಕರ್ ಪಿ ಎಲ್ ನಿರೂಪಿಸಿದರು.