ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ (ರಿ.) ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ಇದರ ವ್ಯವಸ್ಥಾಪನಾ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯಿಂದ ಜಂಟಿ ಸಭೆಯು ಸೋಮವಾರ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಲಯದಲ್ಲಿ ನಡೆಯಿತು.
ನೂತನ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಬೇಕಾಗುವಂತಹ ಅನೇಕ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೆ ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಧಾನ ಅರ್ಚಕರಾದ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್. ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್, ಬೆಂಗಳೂರು ಸಮಿತಿಯ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್. ಪಾಲನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರುಗಳಾದ ಉದಯ ಸುಂದರ್ ಶೆಟ್ಟಿ, ಜಯ ಸಿ. ಕೋಟ್ಯಾನ್, ಭಾಸ್ಕರ್ ಎಂ. ಸಾಲ್ಯಾನ್, ಭಗವಾನ್ ದಾಸ್ ಶೆಟ್ಟಿಗಾರ್,ಕೋಶಾಧಿಕಾರಿ ಸಿಎ ಸುದೇಶ್ ರೈ ಮಂಗಳೂರು, ಜೊತೆ ಕಾರ್ಯದರ್ಶಿ ಅರುಣ್ ಶೆಟ್ಟಿ ಪಾದೂರು, ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.
ಸಭೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನಿರ್ವಹಿಸಿ, ಪ್ರಧಾನ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ ವಂದಿಸಿದರು.