ಕಾಪು : ಇಲ್ಲಿಯ ಕುತ್ಯಾರು ಕುಕ್ಕುಂಜದ ದಿ. ಸೂರ್ಯ ಕುಲಾಲ್ ಅವರ ಮುಖೆನ ಆರಂಭಗೊಂಡ ಶ್ರೀ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಇದರ 25 ನೇ ವರ್ಷದ ಕಾರ್ಯಕ್ರಮ ಜ.10 ರಂದು ನಡೆಯಲಿದ್ದು ಆ ಪ್ರಯುಕ್ತ ಜ. 8 ರ ಬುಧವಾರ ರಾತ್ರಿ 9 ಗಂಟೆಗೆ ಶ್ರೀ ಅಯ್ಯಪ್ಪ ದೇವರ ದೀಪೋತ್ಸವ, ಜ.10 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಹಾಗೂ ಅಂದು ರಾತ್ರಿ 9 ಗಂಟೆಗೆ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ಅಯ್ಯಪ್ಪ ಕ್ಷೇತ್ರ ಮಹಾತ್ಮೆ,ರಾತ್ರಿ 8.30 ರಿಂದ ಅನ್ನ ಸಂತರ್ಪಣೆ ನಡೆಯಲಿದ್ದು ಭಕ್ತರು ಆಗಮಿಸಿ, ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.