ಕಾಪು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-2024 ಹಾಗೂ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಕೊಡಲ್ಪಡುವ ಡಾ. ಎಪಿಜೆ ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಡಿ.29 ರಂದು ಕಲಾಗ್ರಾಮ ಜ್ಞಾನಭಾರತಿ ಯೂನಿವರ್ಸಿಟಿ ಸಭಾಂಗಣದಲ್ಲಿ ರಾಜ್ಯದ ಸ್ವಾಮೀಜಿಗಳು ರಾಜಕೀಯ ಗಣ್ಯತಿಗಣ್ಯರು ಸಾಹಿತಿಗಳು ನೀಡಿ ಗೌರವಿಸಲಿದ್ದಾರೆಂದು ಸಂಘದ ಅಧ್ಯಕ್ಷರಾದ ಕು| ನಿತ್ಯ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.