ಬೆಳ್ಮಣ್ ನಲ್ಲಿ ಅಂತರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ
Posted On:
25-09-2020 10:50PM
ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು,
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಶ್ರೀಮತಿ ಸೌಭಾಗ್ಯ ಕಾರ್ಯಕ್ರಮಕ್ಕೆ ಶುಭ ಹಾರೈಸುದರೊಂದಿಗೆ ರೋಟರಿ ಬೆಳ್ಮಣ್ ನ ಕಾಯಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಮಣ್ ನ ಅಧ್ಯಕ್ಷರಾದ ರೋ| ಶುಭಾಷ್ ಕುಮಾರ್ ವಹಿಸಿದ್ದು ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ರೋ| ರಾಜೇಶ್ ಸಾಲ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರೋ| ಮೋಹನ್ ದಾಸ್ ಶೆಟ್ಟಿ ನಿರೂಪಿಸಿ ಸಂಸ್ಥೆಯ ಕಾರ್ಯದರ್ಶಿ ರೋ| ರವಿರಾಜ್ ಶೆಟ್ಟಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು, ರೋಟರಿ ಸದಸ್ಯರು , ಆಶಾ ಕಾರ್ಯಕರ್ತೆಯರ ತಂಡ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.