ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮ

Posted On: 02-01-2025 12:40PM

ಕಾಪು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಪ್ರಯುಕ್ತ ಗುರುವಾರ ಪೊಲಿಪು ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ "ಹದಿಹರೆಯದ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆ ಮತ್ತು ವೃತ್ತಿ ಸಮಾಲೋಚನೆ ಕಾರ್ಯಕ್ರಮನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಗತ್ತಿನಲ್ಲಿ ಹೆಣ್ಣು ಮಕ್ಕಳು ಪಾತ್ರ ಬಹುಮುಖ್ಯವಾದದ್ದು. ಹೆಣ್ಣು ಮಕ್ಕಳನ್ನು ರಕ್ಷಿಸುವ ಕಾರ್ಯವಾಗಬೇಕು. ಪ್ರಸ್ತುತ ಸಮಾಜದಲ್ಲಿ ವಿವಿಧ ಪಾಳಿಯಲ್ಲಿ ಉದ್ಯೋಗ ಮಾಡುವಂತ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಪುರಸಭೆಯ ಸದಸ್ಯರಾದ ರಾಧಿಕಾ, ಕಾಪು ತಹಶೀಲ್ದಾರರಾದ ಡಾ. ಪ್ರತಿಭ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರ್ ವಿ ನಾಯ್ಕ್, ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶಿವಲಿಂಗಪ್ಪ, ಗಣ್ಯರು, ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.