ಪಡುಬಿದ್ರಿ : ಬೆಳಪು ವ್ಯವಸಾಯ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರಿ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಎಲ್ಲಾ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿಯ ಮುಂದಿನ ಅವಧಿಗೆ ಸತತವಾಗಿ 9 ನೇ ಅವಧಿಗೆ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಉಪಾಧ್ಯಕ್ಷರಾಗಿ ದ್ಯುಮಣಿ ಆರ್ ಭಟ್ ಉಚ್ಚಿಲರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಪಣಿಯೂರಿನಲ್ಲಿರುವ ಸಂಘದ ಕೇಂದ್ರ ಕಛೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ನಿರ್ದೇಶಕರುಗಳಾಗಿ ಪಾಂಡು ಶೆಟ್ಟಿ, ಸಾಧು ಶೆಟ್ಟಿ ಪಣಿಯೂರು, ಆಲಿಯಬ್ಬ, ಗೋಪಾಲ ಪೂಜಾರಿ, ಪಾಂಡು ಎಮ್. ಶೇರಿಗಾರ, ಸೈಮನ್ ಡಿಸೋಜ , ಮೀನ ಪೂಜಾರ್ತಿ, ಸುಂದರಿ, ವಿಮಲ ಅಂಚನ್, ಅನಿತ ಆನಂದರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಚುನಾವಣೆಯಲ್ಲಿ ಸಹಕಾರ ಸಂಘಗಳ ಚುನಾವಣಾ ನಿರ್ವಚನಾಧಿಕಾರಿ ಕೆ. ಆರ್. ರೋಹಿತ್‌ರವರು ಚುನಾವಣಾ ಪ್ರಕ್ರಿಯೆ ನಡೆಸಿದರು.
ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೋಚನ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ನಿರ್ದೇಶಕ ಬಾಲಗೋಪಾಲರವರು ಉಪಸ್ಥಿತರಿದ್ದರು.