ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾದ ಡಾ.ಯು.ಎಂ ಫಾರೂಕ್ ಚಂದ್ರನಗರ

Posted On: 05-01-2025 06:56PM

ಕಾಪು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಕೊಡಲ್ಪಡುವ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಕಲಾಗ್ರಾಮ ಜ್ಞಾನಭಾರತಿ ಯೂನಿವರ್ಸಿಟಿ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಚಿತ್ರದುರ್ಗ, ಕರ್ನಾಟಕ ಸರಕಾರದ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್. ಕೆ. ಸುಧೀಂದ್ರ, ಬಿ.ಎಂ.ಟಿ.ಎಫ್ ರೆವಿನ್ಯೂ ತಹಸೀಲ್ದಾರ್ ದೀಪಾ ಪ್ರಭಾಕರ್ ಮೈಶಾಲೆ, ಲೋಕಾಯುಕ್ತ ಸಿಪಿಐ ಹಾಲಪ್ಪ ವಾಯ್ ಭಾಲದಂಡಿ, ಬೆಳಗಾವಿ ವಿಜಯಕಾಂತ್ ಡೈರಿ ಮತ್ತು ಆಹಾರ ಉತ್ಪನ್ನಗಳ ಉಪಾಧ್ಯಕ್ಷರು ನಿವೇದಿತಾ ಶಿವಕಾಂತ್ ಸಿದ್ನಾಳ್, ಹೈಕೋರ್ಟ್ ವಕೀಲರಾದ ಅನಂತ್ ನಾಯ್ಕ್, ಕೆ.ಪಿ.ಸಿ.ಸಿ ಸದಸ್ಯರಾದ ಅರ್ಜುನ್ ನಾಯಕ್ ವಾಡಿ, ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಕು| ನಿತ್ಯ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.