ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆಯಲ್ಲಿ ಸಾಮಾನ್ಯ ಸದಸ್ಯರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Posted On: 06-01-2025 05:12PM

ಪಡುಬಿದ್ರಿ : ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಚುನಾವಣೆಯಲ್ಲಿ ಯಾವುದೇ ರೀತಿಯ ‌ಅಕ್ರಮ ಮತದಾನ ನಡೆಯದಂತೆ ಪಾರದರ್ಶಕ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸುವಂತೆ ಹಾಗು ಆಡಳಿತ ಮಂಡಳಿಯು ದುರುದ್ದೇಶ ಪೂರಕವಾಗಿ, ಸ್ವಾರ್ಥಕ್ಕಾಗಿ ನಿಗದಿ ಪಡಿಸಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸದಸ್ಯನು ರೂ ರೂ.15,000 ಷೇರು ಮೊಬಲಗನ್ನು ಹೊಂದಿರ ಬೇಕೇಂಬ ನಿಯಮವನ್ನು ರದ್ದು ಪಡಿಸಿ , ಸರಕಾರದ ನಿರ್ದೇಶನದಂತೆ ಕನಿಷ್ಠ ರೂ. 500 ಷೇರು ಮೊತ್ತ ಹೊಂದಿರುವ ಸಾಮಾನ್ಯ ಸದಸ್ಯರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೂಂಡುವಂತೆ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೃೆಗೊಳ್ಳುವುದಕ್ಕಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಶೇಖರ್ ಹೆಜ್ಮಾಡಿ, ಗೌರವ ‌ಸಲಹೆಗಾರ ದಿನೇಶ್ ಕೋಟ್ಯಾನ್ ಪಲಿಮಾರು, ಉಪಾಧ್ಯಕ್ಷರಾದ ಮೈಯದ್ದಿ ಕನ್ನಂಗಾರು, ರಚನ್ ಸಾಲ್ಯಾನ್, ಲೀಲಾಧರ್.ಪಿ., ರೋಶನ್ ಕಾಂಚನ್ ಹೆಜ್ಮಾಡಿ, ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ರತ್ನಾಕರ್ ಕೋಟ್ಯಾನ್ ಉಪಸ್ಥಿತರಿದ್ದರು.