ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಶ್ರೀ ನಾರಾಯಣಗುರು ಟ್ರೋಫಿ - ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ

Posted On: 07-01-2025 05:54PM

ಕಾಪು: ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ 25ನೇ ಶ್ರೀ ನಾರಾಯಣಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ ನೆರವೇರಿತು.

ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್, ಬೆಂದೂರು ರೋಡ್ ಇಲ್ಲಿನ ಹೃದ್ರೋಗ ತಜ್ಞರಾದ ಡಾ. ಮುಕುಂದ ಕುಂಬಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭ ಕಾಪು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ, ಮಂಗಳೂರು ಸಾಮ್ರಾಟ್ ಚೆಸ್ ಯುನಿಟ್ ಕಾರ್ಯದರ್ಶಿ ನಾಗೇಶ್ ಕಾರಂತ್, SNG ಕೋಚಿಂಗ್ ಸೆಂಟರ್ ಹಳೆ ವಿದ್ಯಾರ್ಥಿನಿ ಕು. ನಮೃತಾ ಎಸ್. ಶೆಟ್ಟಿ, ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಧಾಕರ್ ಸಾಲ್ಯಾನ್ ಕಾಪು ಗುರಿಕಾರರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ಸಾಲ್ಯಾನ್ ಕಾರ್ಯದರ್ಶಿ ಬಿಲ್ಲವರ ಸಹಾಯಕರ ಸಂಘ (ರಿ.) ಕಾಪು, ಡಾ. ಅಜಿತ್ ಶೆಣೈ ಮಹಾಲಕ್ಷ್ಮೀ ಕಣ್ಣಿನ ಆಸ್ಪತ್ರೆ ಉಡುಪಿ, ಶ್ರೀ ಲಕ್ಷ್ಮೀ ನಾರಾಯಣ ಆಚಾರ್ಯ ಉಡುಪಿ ಮುಖ್ಯ ಸಲಹೆಗಾರರು ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ನಾಗೇಶ್ ಕಾರಂತ್ ಪಾಂಗಳ ಟೂರ್ನಮೆಂಟ್ ಡೈರೆಕ್ಟರ್, ಶ್ರೀ ಪ್ರಶಾಂತ್ ಎನ್ ಹಾಗೂ ಶಶೀಂದ್ರ ಎಮ್ ಮಾಸ್ಟರ್ ಚೆಸ್ ಅಕಾಡೆಮಿ ಬದಿಯಡ್ಕ, ಉಮಾನಾಥ ಕಾಪು ಅಧ್ಯಕ್ಷರು ಶ್ರೀ ನಾರಾಯಣ ಗುರು ಸ್ಪೋಟ್ಸ್ & ಎಜುಕೇಶನ್ ಟ್ರಸ್ಟ್ ಬಾಬು ಜೆ ಪೂಜಾರಿ ಉಪ್ಪುಂದ ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ರುದ್ರ ರಾಜೀವ್ ಮಂಗಳೂರು, ರನ್ನರ್ ಆಫ್ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ನ ವಿದ್ಯಾರ್ಥಿ ಲೀಲಾ ಜೈ ಕೃಷ್ಣ, ತೃತೀಯ ಚೆಸ್ ಕೋಚ್ ಹರೀಶ್ ಕುಮಾರ್ ಉಡುಪಿ ಪ್ರಶಸ್ತಿ ಗಳಿಸಿದರು.

ಒಟ್ಟು 115 ಬಹುಮಾನ ವಿತರಿಸಲಾಯಿತು. ಫಿಡೇ ಆರ್ಬಿಟರ್ ಕೋಚ್, ಸ್ಥಾಪಕರಾದ ಸಾಕ್ಷಾತ್ ಯು.ಕೆ. ಸ್ವಾಗತಿಸಿದರು. ಫಿಡೇ ಆರ್ಬಿಟರ್ ಕೋಚ್ ನಿರ್ದೇಶಕಿ ಸೌಂದರ್ಯ ಯು.ಕೆ. ಕಾರ್ಯಕ್ರಮ ನಿರೂಪಿಸಿದರು. ಉಮಾನಾಥ ವಂದಿಸಿದರು.