ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಪ್ರಭು ಕರ್ವಾಲು ಆಯ್ಕೆ

Posted On: 10-01-2025 10:37AM

ಉಡುಪಿ : ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಅವರನ್ನು ರಾಜ್ಯಾಧ್ಯಕ್ಷ ಡಾ.ಎಸ್‌ ಬಾಲಾಜಿ ಯವರು ಜಿಲ್ಲಾಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿಯವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಿದ್ದಾರೆ.

ಕಲ್ಯಾಣಪುರ ಡಾ. ಟಿ ಎಮ್ ಎ ಪೈ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಆಯ್ಕೆಯನ್ನು ಮಾಡಲಾಗಿದೆ.