ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ
Posted On:
13-01-2025 06:56PM
ಉಡುಪಿ : ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು ಇದರ ರಜತ ಸಂಭ್ರಮ ಪ್ರಯುಕ್ತ ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ" ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಎ. ವಿ. ಬಾಳಿಗ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಪರೀಕ್ಷೆ ಒಂದು ವ್ಯವಸ್ಥೆ, ಆತಂಕ ಬೇಡ. ಜೀವನ ಎನ್ನುವ ಪರೀಕ್ಷೆ ಅದಕ್ಕಿಂತ ದೊಡ್ಡದು. ಪರೀಕ್ಷೆ ಎನ್ನುವುದು ಒಂದು ಹಬ್ಬ. ಧೈರ್ಯದಿಂದ ಎದುರಿಸಿ ಜೀವನದ ಗುರಿ ಸಾಧಿಸಿ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಯುವ ವಿಚಾರ ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಭಟ್ ಶುಭ ಹಾರೈಸಿದರು.
ವೇದಿಕೆಯ ಸದಸ್ಯರಾದ ರವಿಂದ್ರ ಕುಮಾರ್ , ಶಕುಂತಲಾ, ಕೇಶವ್, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಧ್ಯಾಪಕರುಗಳು ಉಪಸ್ಥಿತರಿದ್ದರು.
ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.