ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 2 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ಶ್ರೀ ವಿಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅರುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಪ್ರಪುಲ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ ಸುವರ್ಣ, ಸತೀಶ್ ಗುಡ್ಡೆಚ್ಚಿ ಹಾಗೂ ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.