ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೆ.ಕೆ ಫ್ರೆಂಡ್ಸ್ ಶಿರ್ವ ಇದರ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆ

Posted On: 14-01-2025 08:11AM

ಶಿರ್ವ : ಕೆ.ಕೆ ಫ್ರೆಂಡ್ಸ್ ಶಿರ್ವ ಇದರ 2025 - 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಜೀವನ್ ಕೋಟ್ಯಾನ್ ಮತ್ತು ಶಿವಾನಂದ ಪೂಜಾರಿ, ಕಾರ್ಯದರ್ಶಿಯಾಗಿ ರಾಕೇಶ್ ಆಚಾರ್ಯ, ಸಹ ಕಾರ್ಯದರ್ಶಿಯಾಗಿ ಹರ್ಷಿತ್ ಪೂಜಾರಿ ಕಲ್ಲಟ್ಟ, ಕೋಶಾಧಿಕಾರಿಯಾಗಿ ಅಶ್ವಿನ್ ಜೋಯ್ ಡಿಸೋಜಾ, ಕ್ರೀಡಾ ಕಾರ್ಯದರ್ಶಿಯಾಗಿ ಸುಕೇಶ್ ಆಚಾರ್ಯ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ಸುನಿಲ್, ಸಾಮಾಜಿಕ ಕಾರ್ಯದರ್ಶಿಯಾಗಿ ಮುಕೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ.

ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.