ಕಾಪು : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ) ಮುಲ್ಕಿ ದ.ಕ. ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಅಭಿನಂದನಾ ಮತ್ತು ಸಾಧಕರ ಸನ್ಮಾನ ಸಮಾರಂಭವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮುದರಂಗಡಿ ಇದರ ಸಭಾಗೃಹದಲ್ಲಿ ಜರಗಿತು.
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ, 2024ನೇ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ 3 ಬಿಲ್ಲವ ಸಂಘಗಳಿಗೆ, ವಿವಿಧ ಕ್ಷೇತ್ರದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡ 12 ಮಂದಿ ಸಾಧಕರಿಗೆ, ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ, ಸಮಾಜ ಸೇವಕಿ ಗೀತಾಂಜಲಿ ಸುವರ್ಣ, ಸಾವಿತ್ರಿ ಗಣೇಶ್ ಸೇರಿದಂತೆ ಸಂಘಟನಾತ್ಮಕವಾಗಿ ಸಾಮಾಜಿಕವಾಗಿ ಮಹಾಮಂಡಲದ ಜೊತೆ ಸಮಾಜದಲ್ಲಿ ಸೇವೆಗೈಯುತ್ತಿರುವ ಆಯ್ದ 12 ಮಂದಿ ಮಹಿಳೆಯರಿಗೆ ಗೌರವ ಅಭಿನಂದನೆಯು ಜರಗಿತು.
ಈ ಸಂದರ್ಭ ಮಹಾಮಂಡಲದ ಸದಸ್ಯ ಸಂಘದ ಪ್ರತಿನಿಧಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.