ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ

Posted On: 28-01-2025 08:03PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಮಂಗಳವಾರ ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಮುಂದಾಳತ್ವದಲ್ಲಿ ಕುಂಕುಮ ಪ್ರಸಾದ ಮುಹೂರ್ತ ನೆರವೇರಿತು.

ನವದುರ್ಗಾ ಲೇಖನವನ್ನು ಬರೆದು ಅರ್ಪಿಸಿ, ನವಚಂಡೀಯಾಗದ ದಿನದಂದು ಸಂಕಲ್ಪದಲ್ಲಿ ಭಾಗಿಯಾಗಲಿರುವ ಭಕ್ತರಿಗೆ ನೀಡುವ ಕುಂಕುಮವನ್ನು ಮಾರಿಯಮ್ಮನಿಗೆ ಅರ್ಪಿಸಿ ಬ್ರಾಹ್ಮಣ ಸಂಘದ ಮಹಿಳೆಯರು ನಿರಂತರ ಲಕ್ಷ್ಮಿ ಶೋಭಾನೆಯೊಂದಿಗೆ ಕುಂಕುಮ ಪ್ರಸಾದವನ್ನು ಪ್ಯಾಕೆಟ್ ಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷರಾದ ಬೀನಾ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.