ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಎಸ್‌ಕೆಪಿಎ ಫೋಟೋಗ್ರಾಫಿ ಕಾರ್ಯಾಗಾರ

Posted On: 29-01-2025 09:42AM

ಕಾಪು : ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ದ.ಕ., ಉಡುಪಿ ಜಿಲ್ಲೆ ವತಿಯಿಂದ ಕಾಪುವಿನ ಪ್ಯಾಲೆಸ್‌ ಗಾರ್ಡನ್‌ನಲ್ಲಿ ಮಂಗಳವಾರ ನಡೆದ ಗಿಂಬಲ್ಸ್‌ ಹಾಗೂ ರೀಲ್ಸ್‌ ಕಾರ್ಯಾಗಾರವನ್ನು ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನವನ್ನು ನಮ್ಮ ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು. ಈ ಕಾರ್ಯಾಗಾರದ ಮೂಲಕ ಕೌಶಲ್ಯವನ್ನು ಹೇಗೆ ವೃದ್ಧಿಸಬಹುದು, ಹೊಸ ಹೊಸ ತಂತ್ರಜ್ಞಾನದ ಬಳಕೆ ಹೇಗೆ ಬಳಸಬಹುದು ಎಂಬುದನ್ನು ಅರಿತು ತಮ್ಮ ವೃತ್ತಿ ಜೀವನದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಸಂಪನ್ಮೂಲ ವ್ಯಕ್ತಿಯಾಗಿ ಸುಮಂತ್‌ ಸುವರ್ಣ ಕಾರ್ಯಾಗಾರ ನಡೆಸಿಕೊಟ್ಟರು.

ಎಸ್‌ಕೆಪಿಎ ಜಿಲ್ಲಾ ಸಂಚಾಲಕ ಕರುಣಾಕರ್‌ ಕಾನಂಗಿ, ಉಪಾಧ್ಯಕ್ಷರಾದ ರಮೇಶ್‌ ಕಲಾಶ್ರೀ ಮತ್ತು ಪ್ರವೀಣ್‌ ಕೊರಿಯ, ಕಾಪು ವಲಯ ಅಧ್ಯಕ್ಷ ಸಚಿನ್‌ ಕುಮಾರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್‌ ಸ್ವಾಗತಿಸಿದರು. ಎಸ್‌ಕೆಪಿಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ್‌ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು.