ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬಹುಮಾನಿತರಾದ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು

Posted On: 30-01-2025 06:01AM

ಪಡುಬಿದ್ರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಶಾಂತಿವನ ಟ್ರಸ್ಟ್ (ರಿ.) ಧರ್ಮಸ್ಥಳ ಇವರು ಆಯೋಜಿಸಿದ ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ರಾವ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

ಪ್ರಬಂಧ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮನ್ವಿತಾ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.

ಧರ್ಮಸ್ಥಳದಲ್ಲಿ ನಡೆದ ಪುರಸ್ಕಾರ ಸಮಾರಂಭದಲ್ಲಿ ಈ ಇಬ್ಬರು ವಿದ್ಯಾರ್ಥಿನಿಯರು ಡಾ. ಡಿ.ವೀರೇಂದ್ರ ಹೆಗ್ಗಡೆ, ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ರಾಮಕೃಷ್ಣ ಮಠ, ಸಂಗೀತ ನಿರ್ದೇಶಕ ವಿ. ಮನೋಹರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ಪುರಸ್ಕಾರವನ್ನು ಪಡೆದರು.