ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಸಹಕಾರಿ ವ್ಯವಸಾಯಿಕಾ ಸಂಘದ ಅಧ್ಯಕ್ಷರಾಗಿ ಕಾಪು ದಿವಾಕರ ಶೆಟ್ಟಿ ಅವಿರೋಧ  ಆಯ್ಕೆ

Posted On: 30-01-2025 09:46PM

ಕಾಪು: ಕಾಪು ಸಹಕಾರಿ ವ್ಯವಸಾಯಿಕ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಾಜ್ಯ ಹಾಲು ಮಹಾ ಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿಯವರು ಸತತ ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯುವ ಸದಸ್ಯ ಸುಲಕ್ಷಣ್ ಎಲ್. ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಕಾಪು ಸಹಕಾರಿ ವ್ಯವಸಾಯಿಕ ಸಂಘದ ಭಾಸ್ಕರ ಸೌಧದಲ್ಲಿ ನಡೆದ ಚುನಾವಣೆಯಲ್ಲಿ  ಚುನಾವಣಾಧಿಕಾರಿಯಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಿಬ್ಬಂದಿ ಕೆ.ಆರ್. ರೋಹಿತ್ ಕುಮಾರ್ ಆಯ್ಕೆ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭ ಮಾತನಾಡಿದ ನಿಯೋಜಿತ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕಳೆದ ಹತ್ತು ವರ್ಷಗಳಿಂದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದ ನನ್ನನ್ನು ಸದಸ್ಯರು ಒಮ್ಮತದಿಂದ ಅಧ್ಯಕ್ಷನಾಗಿ ಪುನರಾಯ್ಕೆ ಮಾಡಿ ಜವಾಬ್ದಾರಿ ನೀಡಿದ್ದಾರೆ. ಈ ಅವಕಾಶವನ್ನು ಸಂಘದ ಅಭಿವೃದ್ದಿಗೆ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ನಿರ್ವಹಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.

ನೂತನ ಆಡಳಿತ ಮಂಡಳಿಯ ಸದಸ್ಯರಾಗಿ ದಿನೇಶ್ ಎ. ಸಾಲ್ಯಾನ್, ಸದಾಶಿವ ಸೇರ್ವೆಗಾರ, ಅಬ್ದುಲ್ ರಜಾಕ್, ಸವಿತಾ ಐರಿನ್ ಕುಂದರ್, ಕವಿತಾ, ಭೋಜ ಎಸ್. ಅಮೀನ್, ಅರುಣ್ ಕುಮಾರ್, ಅನೂಪ್ ಕೆ., ಶ್ರೀಮತಿ ಅರುಣಾ ಆಯ್ಕೆಯಾಗಿದ್ದಾರೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ಶೆಟ್ಟಿ ಉಪಸ್ಥಿತರಿದ್ದರು.