ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸರ್ವೇಶ್ ಭಟ್ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Posted On: 21-02-2025 10:39AM

ಉಡುಪಿ : ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸರ್ವೇಶ್ ಭಟ್ ಶೇ.83.8% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶ್ರೀ ಭ್ರಾಮರಿ ನಾಟ್ಯಾಲಯ, ಅಮ್ಮುಂಜೆಯ ನೃತ್ಯಗುರು ವಿದ್ವಾನ್ ಕೆ.ಭವಾನಿ ಶಂಕರ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ.

ಪೆರಂಪಳ್ಳಿಯ ವೇದಮೂರ್ತಿ ಪ್ರಾಣೇಶ್ ಭಟ್ ಹಾಗೂ ಶ್ರೀಮತಿ ಸೌಮ್ಯ ಭಟ್ ಇವರ ಪುತ್ರರಾಗಿದ್ದು. ಜೈನ್ ಯೂನಿವರ್ಸಿಟಿ ಬೆಂಗಳೂರು ಸಂಸ್ಥೆಯಲ್ಲಿ ಎಂಬಿಎ ಪದವಿಯನ್ನು ಮುಂದುವರಿಸುತ್ತಿದ್ದಾರೆ.